ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕ ಅಥವಾ ಯುವತಿಯರು ಪರಿಶಿಷ್ಟ ಜಾತಿ ಮತ್ತು ಪಂಗಡದ ಒಳಗೆ ಅಂತರ್ಜಾತಿ ವಿವಾಹವಾದರೆ ರಾಜ್ಯ ಸರ್ಕಾರ 2 ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡಲಿದೆ.
2017ರಲ್ಲಿ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಸಿಎಂ ಆಗಿದ್ದ ಅವಧಿಯಲ್ಲಿ ಘೋಷಣೆಯಾಗಿದ್ದ ಯೋಜನೆಯನ್ನು ಸಮಾಜ ಕಲ್ಯಾಣ ಇಲಾಖೆ ಈಗ ಮರು ಜಾರಿಗೊಳಿಸಿದೆ.
ಈ ಯೋಜನೆಯಡಿ ಪ್ರೋತ್ಸಾಹ ಧನ ಪಡೆಯಲು ದಂಪತಿಯ ವಾರ್ಷಿಕ ಆದಾಯ ಗರಿಷ್ಠ 2 ಲಕ್ಷ ರೂಪಾಯಿ ಮಿತಿಯೊಳಗಿರಬೇಕು. ಮದುವೆಯಾದ ಒಂದು ವರ್ಷದೊಳಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಮೊದಲು ಈ ದಂಪತಿ ಉಪ ನೋಂದಾಣಾಧಿಕಾರಿಗಳ ಕಚೇರಿಯಲ್ಲಿ ವಿವಾಹ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ.
ಅಂತರ್ಜಾತಿ ವಿವಾಹವಾದ ಯುವಕ ವಾಸಿಸುವ ಜಿಲ್ಲೆಯಲ್ಲೇ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಪ್ರೋತ್ಸಾಹಧನವನ್ನು ದಂಪತಿಯ ಜಂಟಿ ಹೆಸರಲ್ಲಿರುವ ಬ್ಯಾಂಕ್ ಖಾತೆಗೆ ಸಮಾಜ ಕಲ್ಯಾಣ ಇಲಾಖೆ NEFT ಮೂಲಕ ಜಮೆ ಮಾಡಲಿದೆ.
ADVERTISEMENT
ADVERTISEMENT