ತಮ್ಮ ಮಾನಸಿಕ ಆರೋಗ್ಯದ ಬಗ್ಗೆ ಸಂಶಯ ವ್ಯಕ್ತಪಡಿಸಿರುವ IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಐಪಿಎಸ್ ಅಧಿಕಾರಿ ಡಿ ರೂಪಾ ತಿರುಗೇಟು ನೀಡಿದ್ದಾರೆ.
ಮಾಧ್ಯಮ ಮಿತ್ರರಲ್ಲಿ ವಿನಂತಿ. ಸಿಂಧೂರಿ ಕಳಿಸಿದ ಪತ್ರಿಕಾ ಪ್ರಕಟಣೆ ಗೆ ಉತ್ತರ.
‘ನೀವು ಕೆಲವರು ರೋಹಿಣಿ ಸಿಂಧೂರಿ ಕಳಿಸಿದ ಸಾಲುಗಳನ್ನು, ಅವರ ಪತ್ರಿಕಾ ಪ್ರಕಟಣೆ ಕಳಿಸಿದ್ದೀರಿ.
ಅದರಲ್ಲಿ ಆಕೆ ಹೇಳುತ್ತಾರೆ, ಡಿಕೆ ರವಿ ಸತ್ತದ್ದು mental illness ಇಂದ ಅಂತ. ರವಿಯನ್ನು ಇಷ್ಟು ನಿಕೃಷ್ಟವಾಗಿ ಹೀಯಾಲಿಸಿದರೆ?
ನನ್ನ ಪ್ರಶ್ನೆ ಇಷ್ಟೇ…ರೋಹಿಣಿ ಸಿಂಧೂರಿ ಯಾಕೆ ರವಿಯನ್ನು ಬ್ಲಾಕ್ ಮಾಡಲಿಲ್ಲ. ಅವರಿಬ್ಬರ ಪ್ರೇಮ ಸಲ್ಲಾಪ ಸಿಬಿಐ ಕೊಟ್ಟ ಫೈನಲ್ ರಿಪೋರ್ಟ್ ನಲ್ಲಿ ಎಲ್ಲರ ಕೈ ಸೇರಿದೆ.
ಒಬ್ಬ ಪುರುಷ ಎಲ್ಲೆ ಮೀರಿ ನಡೆದಾಗ ಈಕೆ ಜವಾಬ್ದಾರಿಯುತ ಹೆಣ್ಣು ಮಗಳಾಗಿ ಯಾಕೆ ಬ್ಲಾಕ್ ಮಾಡಲಿಲ್ಲ. ಅಂದರೆ ಉತ್ತೇಜನ ಕೊಟ್ಟಂತೆ ಅಲ್ಲವೇ?
ಅದೇ ರೀತಿ ias ಅಧಿಕಾರಿಗಳಿಗೆ ಕಳಿಸಿದ ಆ ರೀತಿಯ ಚಿತ್ರಗಳು ಉತ್ತೇಜನ ಕೊಡುವುದು ಎಂದು ಅರ್ಥ ಆಗುವುದಿಲ್ಲವೇ?
ಈ ರೀತಿಯ ಚಿತ್ರಗಳನ್ನು ಯಾವ ಯಾವ ಅಧಿಕಾರಿಗೆ, ಯಾಕೆ ಕಳಿಸಿದರು, ಹಾಗೂ ಸೇವಾ ನಿಯಮ ಉಲ್ಲಂಘನೆ ಮಾಡಿರುವ ಬಗ್ಗೆ ಸ್ಪಷ್ಟೀಕರಣ ನೀಡಲಿ.
ಸಂಧಾನಕ್ಕೆ mla ಬಳಿ ಹೋದದ್ದು ಯಾಕೆ. ಯಾವ ಭ್ರಷ್ಟಾಚಾರ ಮುಚ್ಚಿ ಹಾಕಿಕೊಳ್ಳಲು ಅಥವಾ ಯಾವ ಅನೈತಿಕ ನಡತೆ ಮುಚ್ಚಲು? ಉತ್ತರಿಸಿ.
ನನಗೆ ಬೇಡ, ಸರ್ಕಾರಕ್ಕೆ ಉತ್ತರಿಸಿ.
ರೋಹಿಣಿ ಸಿಂಧೂರಿ ಯಾವ forum ಹೋದರೂ, ಸತ್ಯ ಸತ್ಯವೇ. ಸತ್ಯ ಮಣಿಸಲು ಸಾಧ್ಯವಿಲ್ಲ. ಈ ಬಾರಿ ಸಾಧ್ಯವಿಲ್ಲ.
ಎಂದು ಡಿ ರೂಪಾ ಅವರು ತಿರುಗೇಟು ನೀಡಿದ್ದಾರೆ.