ಹಿರಿಯ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
ಕಾನೂನು-ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆಗಿದ್ದ ಅಲೋಕ್ ಕುಮಾರ್ ಅವರನ್ನು ಸಂಚಾರ ಮತ್ತು ವಾಹನ ಸುರಕ್ಷತೆ ವಿಭಾಗದ ಎಡಿಜಿಪಿಯಾಗಿ ವರ್ಗಾಯಿಸಲಾಗಿದೆ.
ಅಪರಾಥ ಮತ್ತು ತಾಂತ್ರಿಕ ಸೇವೆಗಳ ವಿಭಾಗದ ಎಡಿಜಿಪಿ ಆಗಿ ಉಮೇಶ್ ಕುಮಾರ್ ಅವರನ್ನು ವರ್ಗಾಯಿಸಲಾಗಿದೆ. ಇವರು ಆಡಳಿತ ವಿಭಾಗದ ಎಡಿಜಿಪಿಯಾಗಿದ್ದರು.
ಆರ್ ಹಿತೇಂದ್ರ ಅವರನ್ನು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿಯಾಗಿ ವರ್ಗಾಯಿಸಲಾಗಿದೆ. ಇವರು ಅಪರಾಧ ಮತ್ತು ತಾಂತ್ರಿಕ ಸೇವೆಗಳ ವಿಭಾಗದ ಎಡಿಜಿಪಿ ಆಗಿದ್ದರು.
ಸೌಮೆಂದು ಮುಖರ್ಜಿ ಅವರನ್ನು ಆಡಳಿತ ವಿಭಾಗದ ಎಡಿಜಿಪಿಯಾಗಿ ವರ್ಗಾಯಿಸಲಾಗಿದೆ. ಇವರು ಪೊಲೀಸ್ ಕಂಪ್ಯೂಟರ್ ವಿಂಗ್ನ ಎಡಿಜಿಪಿ ಆಗಿದ್ದರು.
ADVERTISEMENT
ADVERTISEMENT