ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆ

ಕೆಲವು ದಿನ ಬಿಡುವು ನೀಡಿದ್ದ ಮಳೆ ಮತ್ತೆ ಆರಂಭವಾಗಿದ್ದು, ಸೆಪ್ಟೆಂಬರ್‌ 27ರಿಂದ ಮೂರು ದಿನ ರಾಜ್ಯಾದ್ಯಂತ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೂರು ದಿನ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉಳಿದಂತೆ ಶಿವಮೊಗ್ಗ, ಕೊಡಗು ಸೇರಿದಂತೆ ಮಲೆನಾಡು ಜಿಲ್ಲೆಗಳು ಹಾಗೂ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.

ಕಳೆದ ಹದಿನೈದು ದಿನಗಳಿಂದ ಮಳೆ ಬಿಡುವು ನೀಡಿತ್ತು. ಸೋಮವಾರದಿಂದ ರಾಜ್ಯದ ಹಲವೆಡೆ ಮಳೆ ಮತ್ತೆ ಆರಂಭವಾಗಿದ್ದು, ಸಾಧಾರಣ ಮಳೆ ಬಿದ್ದಿದೆ. ಸೋಮವಾರ ಬೆಂಗಳೂರಿನ ಹಲವು ಭಾಗಗಳಲ್ಲಿ ಅಲ್ಪ ಮಳೆಯಾಗಿದೆ.

ಇದನ್ನೂ ಓದಿ : ರಾಜ್ಯದ ಈ ಜಿಲ್ಲೆಗಳಲ್ಲಿ ಸೆಪ್ಟಂಬರ್ 11 ರ ವರೆಗೆ ಭಾರೀ ಮಳೆ