Jacqueline Fernandez : ಕೋರ್ಟ್​ ಸಮನ್ಸ್ ಜಾರಿ : ವಿಚಾರಣೆಗೆ ಹಾಜರಾಗುವಂತೆ ಸೂಚನೆ

Jacqueline Fernandez

ಬಾಲಿವುಡ್‌ ನಟಿ ಜಾಕ್ವೆಲಿನ್ ಫೆರ್ನಾಂಡಿಸ್‌ಗೆ (Jacqueline Fernandez) ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. 200 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ ಆಗಿರುವ ಜಾಕ್ವೆಲಿನ್‌ಗೆ ಸೆಪ್ಟೆಂಬರ್ 26ರ ಒಳಗೆ ಜಾರಿ ನಿರ್ದೇಶನಾಲಯದ ಎದುರು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ತಾಕೀತು ಮಾಡಿದೆ.

200 ಕೋಟಿ ರೂ. ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಂಚಕ ಸುಖೇಶ್ ಚಂದ್ರಶೇಖರ್ ವಿರುದ್ಧ ಆಗಸ್ಟ್‌ 17ರಂದು ದಿಲ್ಲಿ ಕೋರ್ಟ್‌ಗೆ ಜಾರಿ ನಿರ್ದೇಶನಾಲಯ ಹೆಚ್ಚುವರಿ ಆರೋಪ ಪಟ್ಟಿ ಸಲ್ಲಿಸಿತ್ತು. ಈ ಆರೋಪ ಪಟ್ಟಿಯಲ್ಲಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರ ಹೆಸರನ್ನು ಆರೋಪಿ ಎಂದು ನಮೂದಿಸಲಾಗಿದೆ. ಜಾಕ್ವೆಲಿನ್‌ ಸಹಚರರಾದ ಸುಖೇಶ್ ಚಂದ್ರಶೇಖರ್ ಹಾಗೂ ಇತರರಿಗೂ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ನ್ಯಾಯಾಲಯದ ಗಮನ ಸೆಳೆದ ದಿಲ್ಲಿ ಪೊಲೀಸ್ ಪರ ವಕೀಲರು, ಇದೇ ಪ್ರಕರಣ ಸಂಬಂಧ ಜಾಕ್ವೆಲಿನ್ ಫೆರ್ನಾಂಡಿಸ್ (Jacqueline Fernandez) ಅವರಿಗೆ ಆಗಸ್ಟ್ 29ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿತ್ತು. ಆದರೆ, ಅವರು ವಿಚಾರಣೆಗೆ ಬರಲಿಲ್ಲ. ಹೀಗಾಗಿ, ಮತ್ತೆ ಸಮನ್ಸ್ ಜಾರಿ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ : ವಿಕ್ರಾಂತ್ ರೋಣ ಬೆಡಗಿ ‘ಜಾಕ್ವೆಲಿನ್ ಫರ್ನಾಂಡಿಸ್​’ರ 7 ಕೋ. ರೂ ವಶ

ಈ ವೇಳೆ ನ್ಯಾಯಾಲಯಕ್ಕೆ ಭರವಸೆ ನೀಡಿದ ಜಾಕ್ವೆಲಿನ್ ಫೆರ್ನಾಂಡಿಸ್ ಪರ ವಕೀಲರು, ತಮ್ಮ ಕಕ್ಷೀದಾರರು ನ್ಯಾಯಾಲಯದ ಆದೇಶದ ಅನ್ವಯ ವಿಚಾರಣೆಗೆ ಹಾಜರಾಗುತ್ತಾರೆ, ತನಿಖೆ ಎದುರಿಸುತ್ತಾರೆ ಹಾಗೂ ಇಡಿಗೆ ಸ್ಪಂದಿಸುತ್ತಾರೆ ಎಂದು ಹೇಳಿದರು.

ಈ ಹಿಂದೆ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರನ್ನು ಆರೋಪಿ ಎಂದು ನಮೂದಿಸಿರಲಿಲ್ಲ. ಆದ್ರೆ, ನ್ಯಾಯಾಲಯಕ್ಕೆ ನೀಡಿದ್ದ ಮಾಹಿತಿಯಲ್ಲಿ ಮಾತ್ರ ಜಾಕ್ವೆಲಿನ್ ಫೆರ್ನಾಂಡಿಸ್ ಹಾಗೂ ನೋರಾ ಫತೇಹಿ ಅವರ ಹೆಸರನ್ನು ನಮೂದಿಸಿತ್ತು.

ಇದನ್ನೂ ಓದಿ : ವಿಕ್ರಾಂತ್ ರೋಣನ ನಟಿ ‘ಜಾಕ್ವೆಲಿನ್ ಫರ್ನಾಂಡೀಸ್’ ತಾಯಿಗೆ ಹೃದಯಾಘಾತ

LEAVE A REPLY

Please enter your comment!
Please enter your name here