ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ತಾಯಿ ಕಿಮ್ ಫರ್ನಾಂಡಿಸ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಕಿಮ್ ಅವರು ಬಹ್ರೇನ್ನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಿಚ್ಚ ಸುದೀಪ್ ಅಭಿನಯದ ಬಿಗ್ಬಜೆಟ್ ಚಿತ್ರ ‘ವಿಕ್ರಾಂತ್ ರೋಣ’ದಲ್ಲಿ ಐಟಂ ಹಾಡಿಗೆ ಹೆಜ್ಜೆ ಹಾಕುವುದರ ಜೊತೆಗೆ ವಿಶೇಷ ಪಾತ್ರದಲ್ಲೂ ಜಾಕ್ವೆಲಿನ್ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಜಾಕ್ವೆಲಿನ್ ಅವರ ಪಾತ್ರದ ಫಸ್ಟ್ಲುಕ್ ಸಹ ಬಿಡುಗಡೆಯಾಗಿ ಸಾಕಷ್ಟು ಸದ್ದು ಮಾಡಿತ್ತು.
ಇತ್ತೀಚಿಗಷ್ಟೇ, ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಜಾರಿ ನಿರ್ದೇಶನಾಲಯದಲ್ಲಿ (ಇ.ಡಿ) ವಿಚಾರಣೆಗೆ ಹಾಜರಾಗಿದ್ದರು. 200 ಕೋಟಿ ರೂ. ಹಣ ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್ ಹೆಸರು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯವು ಹಲವು ಬಾರಿ ಅವರ ವಿಚಾರಣೆ ನಡೆಸಿದೆ.
ನಟ ಅಕ್ಷಯ್ ಕುಮಾರ್ ಅಭಿನಯದ ‘ರಾಮ್ ಸೇತು’ ಚಿತ್ರದಲ್ಲಿ ಜಾಕ್ವೆಲಿನ್ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.