ಭಾರತದ 14 ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧನಕರ್(VoicePresident Jagdeep Dhankar) ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧನಕರ್ (71) ಅವರಿಗೆ ಪ್ರಮಾಣ ವಚನ ಬೋಧಿಸಿದರು. ಧನಕರ್(VoicePresident Jagdeep Dhankar) ಅವರು ಹಿಂದಿಯಲ್ಲಿ, ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಇದನ್ನೂ ಓದಿ : BIG BREAKING: ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಈ ಬಾರಿಯೂ ನಿರಾಸೆ ಖಚಿತ
ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ನಿರ್ಗಮಿತ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಭಾರತದ ಉಪ ರಾಷ್ಟ್ರಪತಿಯು ರಾಜ್ಯಸಭೆ ಸಭಾಧ್ಯಕ್ಷರಾಗಿ ಪ್ರಮುಖ ಪಾತ್ರ ನಿರ್ವಹಿಸುತ್ತಾರೆ.
ಉಪ ರಾಷ್ಟ್ರಪತಿ ಹುದ್ದೆಯು ದೇಶದಲ್ಲಿ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆ ಎನಿಸಿಕೊಂಡಿದೆ. ಒಂದು ವೇಳೆ ರಾಷ್ಟ್ರಪತಿಯ ಸ್ಥಾನ ತೆರವಾದರೆ ಹೊಸಬರ ಆಯ್ಕೆ ಆಗುವವರೆಗೆ ತಾತ್ಕಾಲಿಕವಾಗಿ ಆ ಸ್ಥಾನವನ್ನು ಉಪ ರಾಷ್ಟ್ರಪತಿಗಳು ನಿಭಾಯಿಸುತ್ತಾರೆ.