ವಾಟ್ಸಾಪ್ ಮತ್ತು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಜೈನಧರ್ಮದ ಅವಹೇಳನಕಾರಿಯಾಗಿ ನಿಂದಿಸುವ ಪೋಸ್ಟ್ ಹಾಕುತ್ತಿರುವವರ ವಿರುದ್ಧ ಕ್ರಮಕೈಗೊಳ್ಳುವಂತೆ ಜೈನ ಸಮಾಜ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದೆ.
ಉಡುಪಿ ಜಿಲ್ಲೆಯಲ್ಲಿ ಕಾಲೇಜಿಗೆ ಹಿಜಬ್ ಧರಿಸಿ ವಿದ್ಯಾರ್ಥಿನಿಯರು ಬರುತ್ತಿರುವ ವಿವಾದದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಈ ಚರ್ಚೆಯ ವೇಳೆ ಜೈನ ಧರ್ಮದ ದೇವರುಗಳ ಬಗ್ಗೆ ಹಲವಾರು ಮಂದಿ ಹೀಯಾಳಿಸುವ ಪೋಸ್ಟ್ ಹಾಕುತ್ತಿದ್ದು ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿರುವ ಸುರೇಶ್ ಎಸ್ ತಂಗಾ ಅವರು ಗೃಹ ಸಚಿವರನ್ನು ಭೇಟಿ ಆಗಿ ಮನವಿ ಸಲ್ಲಿಸಿದ್ದಾರೆ.