ಪ್ರಧಾನಿ ಮೋದಿ 3ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಹೊತ್ತಲ್ಲೇ ದೇಶದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಪ್ರವಾಸಿಗರ ಬಸ್ ಮೇಲೆ ಉಗ್ರರು ದಾಳಿ ನಡೆಸಿದ ಪರಿಣಾಮ 10 ಮಂದಿ ಪ್ರವಾಸಿಗರು ಸಾವನ್ನಪ್ಪಿ, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.
ಇಲ್ಲಿನ ರೆಸಾಯ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು ದೇವರ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಮೇಲೆ ಇಂದು ಸಂಜೆ 6 ಗಂಟೆೆ ವೇಳೆಗೆ ಉಗ್ರರು ಗುಂಡಿನ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ.
ಸುದ್ದಿ ತಿಳಿದ ಪೊಲೀಸರು ಕೂಡಲೇ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಇನ್ನು ದಾಳಿಯ ಬಳಿಕ ಉಗ್ರರು ರೆಸಾಯ್, ಪೂಂಚ್ ಮತ್ತು ರಜೌರಿ ಪ್ರದೇಶದಲ್ಲಿ ಅಡಗಿದ್ದಾರೆ ಅಂತ ಹೇಳಲಾಗ್ತಿದೆ.
ಈ ಪ್ರದೇಶದಲ್ಲಿ ಹೈ ಅಲರ್ಟ್ ಘೋಷಣೆಯಾಗಿದೆ.
ADVERTISEMENT
ADVERTISEMENT