ರಾಜ್ಯಸಭಾ ಚುನಾವಣೆಯಲ್ಲಿ ವಿಪ್ ಉಲ್ಲಂಘಿಸಿ ಮತದಾನ ಮಾಡಿದ್ದಾರೆ ಎಂದು ಕೋಲಾರ ಶಾಸಕ ಶ್ರೀನಿವಾಸ್ ಗೌಡ ಹಾಗೂ ಗುಬ್ಬಿ ಶಾಸಕ ಶ್ರೀನಿವಾಸ್ ಎಸ್ಆರ್ ಅವರನ್ನು ಜೆಡಿಎಸ್ ಪಕ್ಷದಿಂ ಉಚ್ಚಾಟನೆ ಮಾಡಿದೆ.
ಇತ್ತೀಚೆಗಷ್ಟೇ ರಾಜ್ಯ ವಿಧಾನಸಭೆ ಚುನಾವಣೆಯಿಂದ ರಾಜ್ಯಸಭೆ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಜೆಡಿಎಸ್ನಿಂದ ಕುಪೇಂದ್ರ ರೆಡ್ಡಿಯವರು ಸ್ಪರ್ಧಿಸಿದ್ದರು. ಆದರೆ, ಮತಗಳ ಕೊರತೆಯಿಂದ ಇವರು ಸೋಲು ಅನುಭವಿಸಬೇಕಾಯಿತು.
ಅಂದೇ ಕೋಲಾರ ಶಾಸಕ ಶ್ರೀನಿವಾಸ್ ಗೌಡ ಹಾಗೂ ಗುಬ್ಬಿ ಶಾಸಕ ಶ್ರೀನಿವಾಸ್ ಎಸ್ಆರ್ ಅಡ್ಡ ಮತದಾನ ಮಾಡಿ ಜೆಡಿಎಸ್ಗೆ ದ್ರೋಹ ಮಾಡಿದ್ದಾರೆ ಎಂದು ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದರು.
ಆ ಬೆನ್ನಲ್ಲೇ ಸುದ್ದಿಗೋಷ್ಠಿ ಮಾಡಿ ಮಾತನಾಡಿದ್ದ ಗುಬ್ಬಿ ಶಾಸಕ ಶ್ರೀನಿವಾಸ್ ಗೌಡ ಅವರು ಕುಮಾರಸ್ವಾಮಿಯವರ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ಮಾಡಿದ್ದರು. ಕೋಲಾರ ಶಾಸಕ ಶ್ರೀನಿವಾಸ್ ಮಾತನಾಡಿ ಜೆಡಿಎಸ್ ಪಕ್ಷದಲ್ಲಿ ವಿಧಾನಪರಿಷತ್ ಗೆ ಸ್ಪರ್ಧಿಸಲು ಒಬ್ಬ ಶಾಸಕರಿಗೆ 50 ಲಕ್ಷ ಕೊಡಬೇಕು ಎಂದು ಗಂಭೀರ ಆರೋಪ ಮಾಡಿದ್ದರು.
ಇದೀಗ, ಜೆಡಿಎಸ್ ಈ ಇಬ್ಬರು ಶಾಸಕರನ್ನು ತನ್ನ ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶಿಸಿದೆ. ಈ ಇಬ್ಬರೂ ಶಾಸಕರು ಅಡ್ಡಮತದಾನ ಮಾಡಿದ್ದಾರೆ. ಇವರ ಶಾಸಕತ್ವ ರದ್ದು ಮಾಡಬೇಕು ಎಂದು ಜೆಡಿಎಸ್ ಸ್ಪೀಕರ್ ಮೊರೆ ಹೋಗಿದೆ.
ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಗಳಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್, ಲೆಹರ್ ಸಿಂಗ್ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ನಿಂದ ಜೈರಾಂ ರಮೇಶ್ ಆಯ್ಕೆಯಾಗಿದ್ದಾರೆ.