ಸೋತ ನೋವಿನಲ್ಲಿದ್ದೇನೆ, JDS ವಿಸರ್ಜನೆ ಮಾಡಲ್ಲ – H D ಕುಮಾರಸ್ವಾಮಿ

ನಾನು ಸೋತ ನೋವಿನಲ್ಲಿದ್ದೇನೆ, ಜೆಡಿಎಸ್ ಪಕ್ಷವನ್ನು ವಿಸರ್ಜನೆ ಮಾಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
https://twitter.com/hd_kumaraswamy/status/1663735249556373504?t=vjK36Va5sb7n8RE23BQ5nw&s=19
ಕೆಲವರ ವಿವೇಕರಹಿತ ಹೇಳಿಕೆಗಳಿಗೆ ಉತ್ತರಿಸುವುದು ಬೇಡ ಭಾವಿಸಿದ್ದೆ. ನಾನು ಸೋತ ನೋವಿನಲ್ಲಿದ್ದೇನೆ. ಕಾಂಗ್ರೆಸ್ ನವರು ಗೆದ್ದ ಅಹಂನಲ್ಲಿ ಇದ್ದಾರೆ. ಅಹಂ ಅಳಿಯುತ್ತದೆ ಅನ್ನುವ ಕನಿಷ್ಠ ಅರಿವು ಅವರಿಗೆ ಇದ್ದಂತೆ ಇಲ್ಲ. ಆ ಅರಿವು ಬರುವ ಕಾಲವೂ ದೂರವಿಲ್ಲ. ಕಾಯುವ ತಾಳ್ಮೆ ನನಗಿದೆ. 1/6
https://twitter.com/hd_kumaraswamy/status/1663735251628343296?t=duP4b3xbx0IUg7IpQX9YMA&s=19
ವಿಧಾನಸಭೆ ಚುನಾವಣೆಯಲ್ಲಿ ಸೋತರೆ @JanataDal_S ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದರು. ಅವರು ಯಾವಾಗ ವಿಸರ್ಜನೆ ಮಾಡುತ್ತಾರೆ? ಪಕ್ಷಕ್ಕೆ ಯಾವಾಗ ಅಂತಿಮ ಸಂಸ್ಕಾರ ಮಾಡುತ್ತಾರೆ? ಎಂದು ಕೆಲ ಅರೆಬೆಂದ ಸಚಿವರು, ಶಾಸಕರು ಸಲ್ಲದ ಹೇಳಿಕೆಗಳನ್ನು ನೀಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. 2/6
https://twitter.com/hd_kumaraswamy/status/1663735255847809024?t=U87U7sf6aWfPYy_gLuEYAg&s=19
ಅವರೆಲ್ಲರ ಅಜ್ಞಾನಕ್ಕೆ ನನ್ನ ಪ್ರಗಾಢ ಸಾಂತ್ವನವಿದೆ. ಅವರ ಕನ್ನಡ ಭಾಷಾಜ್ಞಾನದ ಬಗ್ಗೆ ಕಾಳಜಿ ಇದೆ. ಆ ಮಹಾಶಯರು ನನ್ನ ಹೇಳಿಕೆಗಳನ್ನೊಮ್ಮೆ ತಿಳಿಯಲಿ. ಪತ್ರಿಕೆಗಳಲ್ಲಿ ಪ್ರಕಟವಾಗಿವೆ, ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗಿವೆ. ಕನ್ನಡ ಓದಲು ಬಾರದಿದ್ದರೆ ನನ್ನ ಬಳಿ ಬರಲಿ, ಮನದಟ್ಟು ಆಗುವ ರೀತಿ ಹೇಳುತ್ತೇನೆ. ಕನ್ನಡವನ್ನೂ ಕಲಿಸುತ್ತೇನೆ. 3/6
https://twitter.com/hd_kumaraswamy/status/1663735258976755712?t=VMBsKyjkN2WuKNHP69l9sQ&s=19
ನನಗೆ 123 ಕ್ಷೇತ್ರಗಳನ್ನು ಕೊಟ್ಟರೆ, ನಾನು ಭರವಸೆ ಕೊಟ್ಟಂತೆ ಪಂಚರತ್ನ ಯೋಜನೆಗಳನ್ನು ಜಾರಿ ಮಾಡದಿದ್ದರೆ ಜೆಡಿಎಸ್ ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ, ಆಮೇಲೆ ಎಂದೂ ವೋಟು ಕೇಳಲು ನಿಮ್ಮ ಮನೆ ಬಾಗಿಲಿಗೆ ಬರುವುದಿಲ್ಲ ಎಂದು ಜನರಿಗೆ ಹೇಳಿದ್ದು ಹೌದು.4/6
https://twitter.com/hd_kumaraswamy/status/1663735262336413698?t=5hctjGUVl4wJE9V0vwQmDg&s=19
ಚುನಾವಣೆ ಫಲಿತಾಂಶ ಬಂದಿದೆ, ನನಗೆ ಜನರು 123 ಕ್ಷೇತ್ರ ಕೊಡಲಿಲ್ಲ. ಈಗ ಪಂಚರತ್ನ ಜಾರಿ ಹಾಗೂ ಪಕ್ಷ ವಿಸರ್ಜನೆ ಪ್ರಶ್ನೆ ಎಲ್ಲಿ? ಸಾಮಾನ್ಯಜ್ಞಾನವೇ ಇಲ್ಲದ ಸಚಿವರಿಗೆ ಈ ಪರಿ ಅಜ್ಞಾನವಿದೆ ಎಂದು ನಾನಂತೂ ಎಣಿಸಿರಲಿಲ್ಲ. ಇಷ್ಟು ಅವಿವೇಕವುಳ್ಳ ಇವರ ಮುಂದಿನ ಆಡಳಿತದ ಈಗಲೇ ಆತಂಕವಾಗುತ್ತಿದೆ. 5/6
https://twitter.com/hd_kumaraswamy/status/1663735266241298432?t=u64iTyWLROLXvD44nDf9YQ&s=19
ಪಕ್ಷ ವಿಸರ್ಜನೆ, ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರಹೀನರಿಗೆ ಹೇಳುವುದು ಇಷ್ಟೇ. ನನಗೆ 123 ಸೀಟು ಬಂದಿಲ್ಲ, ಪಂಚರತ್ನ ಜಾರಿಗೆ ಜನರು ಅವಕಾಶವನ್ನೂ ಕೊಟ್ಟಿಲ್ಲ, ಹಾಗಾಗಿ ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ. ಇನ್ನೇನಾದರೂ ಅನುಮಾನ ಇದ್ದವರು ಬರಲಿ, ಅಂಥವರ ಅಜ್ಞಾನ ಹೋಗಲಾಡಿಸುತ್ತೇನೆ.6/6
ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.