ಜೆಡಿಎಸ್ ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜೊತೆಗೆ ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.
ಎಂಎಲ್ಸಿ ಮರಿತಿಬ್ಬೇಗೌಡ ಅವರು ಸಲ್ಲಿಸಿರುವ ರಾಜೀನಾಮೆಯನ್ನು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು
2000ರಲ್ಲಿ ಬೆಂಗಳೂರು ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ನಿಂದ ಗೆದ್ದು ಎಂಎಲ್ಸಿ ಆಗಿದ್ದರು. ಆ ಬಳಿಕ ಎರಡು ಬಾರಿ ಪಕ್ಷೇತರರಾಗಿ ಗೆದ್ದಿದ್ದರು.
2000 ಜೂನ್ನಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ವಿಧಾನ ಪರಿಷತ್ಗೆ ಆಯ್ಕೆಯಾಗಿದ್ದೆ. ಎರಡನೇ ಬಾರಿ ಪಕ್ಷೇತರವಾಗಿ ಗೆದ್ದು ಬಂದಿದ್ದೆ. ಮೂರು, ನಾಲ್ಕನೇ ಬಾರಿ ನಾನು ಜನತಾದಳದಿಂದ ಗೆದ್ದು ಬಂದಿದ್ದೇನೆ. ಪಕ್ಷದ ನಿಷ್ಠಾವಂತ ಸದಸ್ಯನಾಗಿ ಕೆಲಸ ಮಾಡಿದ್ದೇನೆ ಎಂದು ಮರಿತಿಬ್ಬೇಗೌಡ ಅವರು ಹೇಳಿದ್ದಾರೆ.
ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ಅವರ ನಿರ್ಧಾರಗಳ ಬಗ್ಗೆ ಅಸಮಾಧಾನಗೊಂಡಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದರು.