ಜೆಡಿಎಸ್ ಹೀನಾಯ ಸೋಲಿನ ಬಳಿಕ ನಿಖಿಲ್ ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರಿಗೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಇತ್ತ ನಿನ್ನೆಯೇ ಸಿ ಎಂ ಇಬ್ರಾಹಿಂ ಕೂಡಾ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿಧಾನಸಭೆಯಲ್ಲಿ ಜೆಡಿಎಸ್ ಸಾರ್ವಕಾಲಿಕ ಕಳಪೆ ಪ್ರದರ್ಶನ ನೀಡಿ ಕೇವಲ 19 ಸ್ಥಾನ ಗೆದ್ದಿತ್ತು. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದ ನಿಖಿಲ್ ಅವರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ವಿರುದ್ಧ ಹೀನಾಯವಾಗಿ ಸೋತರು.
ಈಗ ಸೊರಬ ಕಾಂಗ್ರೆಸ್ ಶಾಸಕರಾಗಿರುವ ಮಧು ಬಂಗಾರಪ್ಪ ಅವರನ್ನು ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ನಿಖಿಲ್ ಅವರನ್ನು ಆ ಹುದ್ದೆಗೆ ತಂದು ಕೂರಿಸಿದ್ದರು.
ವಿಧಾನಸಭೆ ಚುನಾವಣಾ ಫಲಿತಾಂಶ ಅತೀವ ಬೇಸರ ಉಂಟು ಮಾಡಿದೆ ಮತ್ತು ಜೊತೆಗೆ ಪಕ್ಷವನ್ನು ಹೊಸದಾಗಿ ಕಟ್ಟುವ ಹಲವು ಸಾಧ್ಯತೆಗಳನ್ನು ತೆರೆದಿದೆ ಎಂದು ನಿಖಿಲ್ ಅವರು ಪತ್ರದಲ್ಲಿ ಹೇಳಿದ್ದಾರೆ.
ADVERTISEMENT
ADVERTISEMENT