ವಾಲ್ಮೀಕಿ ನಿಗಮ ಹಗರಣ ಮತ್ತು ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಜೊತೆಯಾಗಿ ನಡೆಸಬೇಕಿದ್ದ ಪಾದಯಾತ್ರೆ ಮುಂದೂಡಿಕೆಯಾಗಿದೆ.
ಇವತ್ತು ಬೆಂಗಳೂರಲ್ಲಿ ನಡೆದ ಜೆಡಿಎಸ್ ಕೋರ್ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ರಾಜ್ಯಾದ್ಯಂತ ಮಳೆಯಿಂದ ಬಹುತೇಕ ಜಿಲ್ಲೆಗಳಲ್ಲಿ ನೆರೆಯಿಂದ ಜನರ ಬದುಕು ದುಸ್ತರವಾಗಿದೆ. ಪ್ರವಾಹದಿಂದ ಜನರು ಸಂಕಷ್ಟದಲ್ಲಿರುವ ಇಂತಹ ದುರಿತ ಸನ್ನಿವೇಶದಲ್ಲಿ ಪಾದಯಾತ್ರೆಯನ್ನು ಮುಂದೂಡುವುದು ಸೂಕ್ತ ಎಂದು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.. ಇದರ ಸಾಧಕ ಬಾಧಕಗಳ ಕುರಿತು ಎರಡು ಪಕ್ಷಗಳ ಮುಖಂಡರು ಚರ್ಚಿಸಿ ತೀರ್ಮಾನಿಸಲಿದ್ದಾರೆ ಎಂದು ಜೆಡಿಎಸ್ ಹೇಳಿದೆ.
ಜಾತ್ಯತೀತ ಜನತಾದಳ ಪಕ್ಷದ ಕೇಂದ್ರ ಕಚೇರಿ ಜೆ.ಪಿ. ಭವನದಲ್ಲಿ ಕೋರ್ ಕಮಿಟಿ ಅಧ್ಯಕ್ಷರಾದ ಶ್ರೀ. ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಿತು. ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ಸೇರಿದಂತೆ ಭ್ರಷ್ಟ ಕಾಂಗ್ರೆಸ್ ಸರ್ಕಾರ ವಿರುದ್ಧ ಜನಾಂದೋಲನ ರೂಪಿಸಲು ಹಮ್ಮಿಕೊಂಡಿರುವ ಪಾದಯಾತ್ರೆ ಕುರಿತು ಸಭೆಯಲ್ಲಿ ಚರ್ಚಿಸಿ ಮುಖಂಡರಿಂದ ಅಭಿಪ್ರಾಯ ಪಡೆಯಲಾಯಿತು.
ರಾಜ್ಯಾದ್ಯಂತ ಮಳೆಯಿಂದ ಬಹುತೇಕ ಜಿಲ್ಲೆಗಳಲ್ಲಿ ನೆರೆಯಿಂದ ಜನರ ಬದುಕು ದುಸ್ತರವಾಗಿದೆ. ಪ್ರವಾಹದಿಂದ ಜನರು ಸಂಕಷ್ಟದಲ್ಲಿರುವ ಇಂತಹ ದುರಿತ ಸನ್ನಿವೇಶದಲ್ಲಿ ಪಾದಯಾತ್ರೆಯನ್ನು ಮುಂದೂಡುವುದು ಸೂಕ್ತ ಎಂದು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು..ಇದರ ಸಾಧಕ ಬಾಧಕಗಳ ಕುರಿತು ಎರಡು ಪಕ್ಷಗಳ ಮುಖಂಡರು ಚರ್ಚಿಸಿ ತೀರ್ಮಾನಿಸಲಿದ್ದಾರೆ
ಎಂದು ಜೆಡಿಎಸ್ ಹೇಳಿದೆ.
ADVERTISEMENT
ADVERTISEMENT