ರಾಜ್ಯಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಬೆಂಬಲ ಕೋರಿದ್ದಾರೆ. `ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಕಾಂಗ್ರೆಸ್ ತನ್ನ ಮೊದಲ ಪ್ರಾಶಸ್ತ್ಯದ ಮತ ನೀಡಲಿ. ನಾವು ಕಾಂಗ್ರೆಸ್ನ ಮೊದಲ ಅಭ್ಯರ್ಥಿಗೆ ನಮ್ಮ 32 ಶಾಸಕರ ಎರಡನೇ ಪ್ರಾಶಸ್ತ್ಯದ ಮತಗಳನ್ನು ಕೊಡುತ್ತೇವೆ’ ಎಂದು ಮೈಸೂರಲ್ಲಿ ಕುಮಾರಸ್ವಾಮಿ ಹೇಳಿದ್ದಾರೆ.
`ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೆವಾಲಾ ಅವರೊಂದಿಗೆ ಮಾತಾಡಿ ಬೆಂಬಲ ಕೋರಿದ್ದೇನೆ’ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ
`ಕುಪೇಂದ್ರ ರೆಡ್ಡಿ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಅವರನ್ನು ಭೇಟಿ ಆಗಿದ್ದೆ. ಆಗ ಕೆಪಿಸಿಸಿ ಅಧ್ಯಕ್ಷರ ಡಿಕೆಶಿ ಜೊತೆಗೆ ದೂರವಾಣಿ ಮೂಲಕ ಮಾತಾಡಿದ್ದೆ. ಆಗಲೂ ಅವರಿಗೆ ಬೆಂಬಲ ನೀಡುವಂತೆ ಕೋರಿದ್ದೇನೆ’
`ನಾವು ಅಭ್ಯರ್ಥಿ ಹಾಕ್ತೇವೆ ಎಂದು ಸೋನಿಯಾ ಗಾಂಧಿ ಅವರಿಗೆ ಹೇಳಿದ್ದೆವು’ ಎಂದೂ ಕುಮಾರಸ್ವಾಮಿ ಹೇಳಿದ್ದಾರೆ.