ಅಸ್ಸಾಂನ ಬರ್ಪೇಟ್ ಪೊಲೀಸ್ ಠಾಣೆಯ ಪೊಲೀಸರು ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿಯವರನ್ನು ಮಂಗಳವಾರ ಮರು ಬಂಧಿಸಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪರ್ಪೇಟಾ ನ್ಯಾಯಲಯದ ಮುಖ್ಯ ನಾಯಾಧೀಶರು, ಜಿಗ್ನೇಶ್ ಮೇವಾನಿ ಜಾಮೀನು ಅರ್ಜಿಯನ್ನು ತಿರಸ್ಕೃತಗೊಳಿಸಿ, 5 ದಿನ ನ್ಯಾಯಾಂಗ ಬಂಧನ ವಿಧಿಸಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಪಬ್ಲಿಕ್ ಪ್ರಾಸಿಕ್ಯೂಟರ್, ಜಿಗ್ನೇಶ್ ಮೇವಾನಿಯವರ ಜಾಮೀನು ಅರ್ಜಿ ತಿರಸ್ಕಾರವಾಗಿದೆ. ನಾವು 12 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕೇಳಿದ್ದೆವು. ಆದರೆ, 5 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಹೇಳಿದ್ದಾರೆ.
ಟ್ವೀಟ್ ಮಾಡಿ ನರೇಂದ್ರ ಮೋದಿಯವರನ್ನು ಅವಮಾನಿಸಿದ್ದಾರೆ ಎಂಬ ಪ್ರಕರಣದಲ್ಲಿ ಜಿಗ್ನೇಶ್ ಮೇವಾನಿಯವರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ 2 ದಿನಗಳ ನಂತರ ಜಾಮೀನು ದೊರೆತ ಕೆಲವೇ ಗಂಟೆಗಳಲ್ಲಿ ಬರ್ಪೇಟಾ ಪೊಲೀಸರು ಮೇವಾನಿಯವರನ್ನು ಮರುಬಂಧಿಸಿದ್ದರು.
ಏ.21 ರಂದು ದಾಖಲಾದ ಸಾರ್ವಜನಿಕ ಸೇವಕರ ಕರ್ತವ್ಯ ನಿರ್ವಹಣೆಗೆ ತಡೆಯೊಡ್ಡಿದ್ದಾರೆ ಎಂಬ ಪ್ರಕರಣದಲ್ಲಿ ಐಪಿಸಿ ಸೆಕ್ಷನ್, 294, 323, 353 ಮತ್ತು 354 ಅಡಿ ಕೇಸ್ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಗುಜರಾತ್ ಶಾಸಜ ಜಿಗ್ನೇಶ್ ಮೇವಾನಿಯವರನ್ನು ಅಸ್ಸಾಂ ಪೊಲೀಸರು ಮರುಬಂಧಿಸಿದ್ದರು.