ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 995 ಹುದ್ದೆಗಳಿಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ರಕ್ಷಣಾ ಇಲಾಖೆಯ ಗ್ರೇಡ್ 2 ಹುದ್ದೆಗಳು ಇವಾಗಿದ್ದು, ದೇಶದೆಲ್ಲೆಡೆ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ನೇಮಕಾತಿ, ಅರ್ಜಿ ಸಲ್ಲಿಕೆ, ಆಯ್ಕೆ ಪ್ರಕ್ರಿಯೆ ಸೇರಿದಂತೆ ಇನ್ನಿತರ ಮಾಹಿತಿ ಈ ಕೆಳಗಿನಂತಿದೆ.
ಹುದ್ದೆ ವಿವರ: ಕೇಂದ್ರ ಗುಪ್ತಚರ ಇಲಾಖೆಯಲ್ಲಿ995 ಅಸಿಸ್ಟಂಟ್ ಸೆಂಟ್ರಲ್ ಇಂಟಲಿಜೆನ್ಸಿ ಆಫೀಸರ್ (ಎಸಿಐಒ) ಗ್ರೇಡ್ 2/ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ ಹೊಂದಿರಬೇಕು.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷಗಳನ್ನು ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ ಮತ್ತು ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ವೇತನ: ಈ ಹುದ್ದೆಗೆ 44900-142400 ರೂ ಮಾನಸಿಕ ವೇತನ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಪ್ರಕ್ರಿಯೆ ಶುಲ್ಕ 450 ರೂ ಅನ್ನು ಎಲ್ಲ ಅಭ್ಯರ್ಥಿಗಳು ಭರಿಸಬೇಕಿದೆ. ಇನ್ನು ಪರೀಕ್ಷೆ ವೆಚ್ಚ 100 ರೂ ಆಗಿದೆ. ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸರಿಯಾಗಿ ಓದಿ ಅರ್ಥೈಸಿಕೊಂಡು ಮುಂದುವರೆಯಬೇಕು.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಎರಡು ಪತ್ರಿಕೆಗಳನ್ನು ಒಳಗೊಂಡಿರುತ್ತದೆ ಮತ್ತು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಲಾಗುವುದು.
ಈ ಹುದ್ದೆಗೆ ರಾಜ್ಯದ ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ ಈ ಕೇಂದ್ರದಲ್ಲಿ ಈ ಹುದ್ದೆಗೆ ಪರೀಕ್ಷೆ ನಡೆಯಲಿದೆ. ಈ ಹುದ್ದೆಗೆ ನವೆಂಬರ್ 25ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಡಿಸೆಂಬರ್ 15 ಆಗಿದೆ. ಅರ್ಜಿ ಶುಲ್ಕ ಪಾವತಿಗೆ ಡಿಸೆಂಬರ್ 19 ಕಡೆಯ ದಿನವಾಗಿದೆ.
ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ mha.gov.in ಅಥವಾ nsc.gov.in ಇಲ್ಲಿಗೆ ಭೇಟಿ ನೀಡಬಹುದು.