Kalaburagi: ಹಣ ಹಂಚುತ್ತಿದ್ದ ಬಿಜೆಪಿಯವರನ್ನು ಬೆನ್ನಟ್ಟಿ ಹಿಡಿದ ಡಿಸಿ

ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕುವಂತೆ ಆಮಿಷ ಒಡ್ಡಿ, ಹಣ ಹಂಚಿಕೆ ಮಾಡುತ್ತಿದ್ದ ಇಬ್ಬರನ್ನು ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ ಗುರುಕರ್ ಬೆನ್ನಟ್ಟಿ ಹಿಡಿದ ಘಟನೆ ಕಲಬುರಗಿ ದಕ್ಷಿಣ ಮತ ಕ್ಷೇತ್ರದ ಸಂಗಮೇಶ್ವರ ಕಾಲೊನಿಯಲ್ಲಿ ಕಳೆದ ರಾತ್ರಿ ನಡೆದಿದೆ.

ಹಾಲಿ ಶಾಸಕ, ಬಿಜೆಪಿ ಅಭ್ಯರ್ಥಿ ದತ್ತಾತ್ರೇಯ ಪಾಟೀಲ್ ರೇವೂರ್ ಕರೆಯವರು ಎನ್ನಲಾದ ಇಬ್ಬರು ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಬೀದಿ ದೀಪ ಆರಿಸಿ ಹಣ ಹಂಚುತ್ತಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ನೇರವಾಗಿ ಜಿಲ್ಲಾಧಿಕಾರಿಗಳಿಗೆ ಫೋನ್ ಮಾಡಿ ದೂರು ನೀಡಿದ್ದರು.. ತಕ್ಷಣ ಕಾರ್ಯಪ್ರವೃತ್ತರಾದ ಜಿಲ್ಲಾಧಿಕಾರಿಗಳು ಪೊಲೀಸರ ಗಮನಕ್ಕೂ ವಿಷಯ ತರದೇ ನೇರವಾಗಿ ಸ್ಥಳಕ್ಕೆ ಧಾವಿಸಿದರು.

ಈ ಹಠಾತ್ ಪರಿಣಾಮದಿಂದ ಕಕ್ಕಾಬಿಕ್ಕಿಯಾದ ಇಬ್ಬರು ತಮ್ಮ ಕಾರನ್ನು ಹತ್ತಿ ಎಸ್ಕೇಪ್ ಆಗಲು ಪ್ರಯತ್ನಿಸಿದರು. ಗಂಟೆಹೆ ನೂರು ಕಿಲೋಮೀಟರ್ ವೇಗದಲ್ಲಿ ಕಾರು ಚಲಾಯಿಸಿಕೊಂಡು ಪರಾರಿಯಾಗುತ್ತಿದ್ದರು. ಕೂಡಲೇ ಅವರನ್ನು ಬೆನ್ನಟ್ಟಿದ ಜಿಲ್ಲಾಧಿಕಾರಿಗಳು ಕೇಂದ್ರ ಬಸ್ ನಿಲ್ದಾಣದ ಬಳಿ ಅವರನ್ನು ತಡೆದರು. ನಂತರ ಸ್ಥಳಕ್ಕೆ ಧಾವಿಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡರು. ಕೋರ್ಟ್ ಅನುಮತಿ ಪೊಲೀಸರು ಎಫ್​ಐಆರ್ ದಾಖಲಿಸಲಿದ್ದಾರೆ.

ಜಿಲ್ಲಾಧಿಕಾರಿಗಳು ನಡೆಸಿದ ಈ ಕಾರ್ಯಾಚರಣೆಯ ದೃಶ್ಯಗಳು ಈಗ ವೈರಲ್ ಆಗೊವೆ