ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮಾ ಹರೀಶ್ ಗೆ ಮಾತೃವಿಯೋಗವಾಗಿದೆ.
ನಿರ್ಮಾಪಕ ಬಾ.ಮಾ ಹರೀಶ್ ತಾಯಿ ಪ್ರೇಮ ನಿಧನರಾಗಿದ್ದಾರೆ.
ಪ್ರೇಮ ಅವರಿಗೆ 74 ವರ್ಷ ವಯಸ್ಸಾಗಿತ್ತು.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರಿನ ವಿಜಯನಗರದಲ್ಲಿರುವ ಬಾ.ಮಾ ಹರೀಶ್ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ನಾಳೆ ಬೆಳಗ್ಗೆ 11 ಗಂಟೆಗೆ ಸ್ವಂತ ಊರು ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.