ಪ್ರಭುದೇವ್ ಮತ್ತು ಶಿವರಾಜ್ ಕುಮಾರ್ ನಟಿಸಿರುವ ‘ಕರಟಕ ದಮನಕ’ಸಿನಿಮಾ ಶಿವರಾತ್ರಿ ದಿನದಂದು ರಿಲೀಸ್ ಆಗಲಿದೆ. ಮಾರ್ಚ್ 8 ರಂದು ತಮ್ಮ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ.
ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ತಯಾರಾಗಿರುವ, ಯೋಗರಾಜ್ ಭಟ್ ನಿರ್ದೇಶನದ ಈ ಸಿನಿಮಾಗೆ ವಿಭಿನ್ನವಾದ ಶೀರ್ಷಿಕೆ ಇಡಲಾಗಿದೆ. ಮೊದಲ ಬಾರಿಗೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಇಂಡಿಯನ್ ಮೈಕೆಲ್ ಜಾಕ್ಸನ್ ಪ್ರಭುದೇವ ಜತೆಯಾಗಿ ಅಭಿನಯಿಸಿದ್ದು ವಿಶೇಷ.