ಕಾರ್ಕಳದಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ 9ನೇ ತರಗತಿ ವಿದ್ಯಾರ್ಥಿ ಸಾವನ್ ವರ್ಮಾ ಮತ್ತು 7ನೇ ತರಗತಿ ವಿದ್ಯಾರ್ಥಿನಿ ಆಯುಶ್ರೀ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಜ್ಞಾನಸುಧಾ ಪ್ರೌಢಶಾಲೆ ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕರಾಟೆ ಸ್ಪರ್ಧೆ ನಡೆಯಿತು.
ಪ್ರಾಥಮಿಕ ವಿಭಾಗದಲ್ಲಿ ಏಳನೇ ತರಗತಿಯ ಆಯುಶ್ರೀ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಒಂಬತ್ತನೇ ತರಗತಿಯ ಸಾವನ್ ವರ್ಮ ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರಾಥಮಿಕ ವಿಭಾಗದಲ್ಲಿ ಏಳನೇ ತರಗತಿಯ ಅದಿತಿ ದ್ವಿತೀಯ ಸ್ಥಾನ, ಶಗುನ್ ವರ್ಮ ತೃತೀಯ ಸ್ಥಾನ, ರಿತು ಪ್ರಾನ್ಸಿಸ್ ದ್ವಿತೀಯ ಸ್ಥಾನ, ಆರನೇ ತರಗತಿಯ ಅಧ್ವಂತ್ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಪ್ರೌಢ ಶಾಲಾ ವಿಭಾಗದಲ್ಲಿ ಏಳನೇ ತರಗತಿಯ ಅಬ್ದುಲ್ ಸಫ್ವಾನ್ ತೃತೀಯ ಸ್ಥಾನ, ಒಂಬತ್ತನೇ ತರಗತಿಯ ಸಮ್ಯಕ್ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ADVERTISEMENT
ADVERTISEMENT