ಕಾರ್ಕಳ ತಾಲೂಕಿನಲ್ಲಿ ಇಬ್ಬರು ಗ್ರಾಮ ಪಂಚಾಯತ್ ಸದಸ್ಯರನ್ನು ಬಿಜೆಪಿ ಪಕ್ಷದಿಂದ ಅಮಾನತು ಮಾಡಲಾಗಿದೆ.
ನಿಟ್ಟೆ ಗ್ರಾಮ ಪಂಚಾಯತ್ ಸದಸ್ಯ ಸುಭಾಶ್ ಚಂದ್ರ ಹೆಗ್ಡೆ ಮತ್ತು ಮುದ್ರಾಡಿ ಗ್ರಾಮ ಪಂಚಾಯತ್ ಸದಸ್ಯ ಶುಭಧರ್ ಮುದ್ರಾಡಿ ಅವರನ್ನು ಬಿಜೆಪಿಯಿಂದ ಅಮಾನತು ಮಾಡಲಾಗಿದೆ.
ವಿಧಾನಸಭಾ ಚುನಾವಣೆಯ ವೇಳೆಗೆ ಶಾಸಕ ಸುನಿಲ್ ಕುಮಾರ್ ಅವರ ವಿರುದ್ಧ ಕೆಲಸ ಮಾಡುವ ಮೂಲಕ ಪಕ್ಷದ ಶಿಸ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.
ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ ಎಂದು ಕಾರ್ಕಳ ಬಿಜೆಪಿ ಅಧ್ಯಕ್ಷ ಮಹಾವೀರ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ADVERTISEMENT
ADVERTISEMENT