ನಾಳೆ ಹೊರಬೀಳಲಿದೆ ದ್ವಿತೀಯ ಪಿಯು ರಿಸಲ್ಟ್

ಬೆಂಗಳೂರು: ಮಂಗಳವಾರ ದ್ವಿತೀಯ ಪಿಯುಸಿ ಫ‌ಲಿತಾಂಶ ಹೊರ ಬೀಳಲಿದೆ. ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿಯಲ್ಲಿ ಪಡೆದಿರುವ ಅಂಕಗಳ ಆಧಾರದಲ್ಲಿ ವಿದ್ಯಾರ್ಥಿಗಳು ಫ‌ಲಿತಾಂಶ ಪಡೆಯಲಿದ್ದಾರೆ.

2020-21ನೇ ಸಾಲಿನ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಹೊಸ ವಿದ್ಯಾರ್ಥಿಗಳು, ಪುನರಾವರ್ತಿತತರು (ರಿಪೀಟರ್) ಫಲಿತಾಂಶವನ್ನು ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರ ಕಚೇರಿಯಲ್ಲಿ ಬಿಡುಗಡೆ ಮಾಡಲಿದ್ದಾರೆ.

ವಿದ್ಯಾರ್ಥಿಗಳು ಜು.20ರ ಸಂಜೆ 4 ಗಂಟೆಯ ನಂತರ https://karresults.nic.in/ ನಲ್ಲಿ ಫ‌ಲಿತಾಂಶ ಪಡೆಯಬಹುದಾಗಿದೆ ಎಂದು ಪಿಯು ಇಲಾಖೆ ಪ್ರಕಟಣೆ ತಿಳಿಸಿದೆ.

ವಿದ್ಯಾರ್ಥಿಗಳಿಗೆ ಈಗಾಗಲೇ ನೋಂದಣಿ ಸಂಖ್ಯೆ ನೀಡಲಾಗಿದೆ. ಈ ಸಂಖ್ಯೆ ಸಿಗದ ವಿದ್ಯಾರ್ಥಿಗಳು https://pue.kar.nic.in/ನಲ್ಲಿ know my registration number ಲಿಂಕ್‌ ಮೂಲಕ ವ್ಯಾಸಂಗ ಮಾಡುತ್ತಿರುವ ಜಿಲ್ಲೆ, ಕಾಲೇಜನ್ನು ಆಯ್ಕೆ ಮಾಡಿಕೊಂಡು ನೋಂದಣಿ ಸಂಖ್ಯೆ ಪಡೆಯಬಹುದಾಗಿದೆ. ಖಾಸಗಿ ಅಭ್ಯರ್ಥಿಗಳಿಗೆ ನಂತರದಲ್ಲಿ ಫ‌ಲಿತಾಂಶ ಪ್ರಕಟವಾಗಲಿದೆ.

LEAVE A REPLY

Please enter your comment!
Please enter your name here