ಇವತ್ತು ಪ್ರಕಟವಾಗ ಬೇಕಿದ್ದ 5,8,9 ಮತ್ತು 11ನೇ ತರಗತಿಗಳಿಗೆ ನಡೆದಿದ್ದ ಪರೀಕ್ಷೆಗಳ ಫಲಿತಾಂಶ ಪ್ರಕಟಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.
ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬೆಲಾ ತ್ರಿವೇದಿ ಮತ್ತು ಪಂಕಜ್ ಮಿಶ್ರಾ ಅವರಿದ್ದ ಪೀಠ ಫಲಿತಾಂಶ ಪ್ರಕಟಿಸದಂತೆ ಸೂಚಿಸಿದೆ.
ಈ ಸಂಬಂಧ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮಾಹಿತಿ ನೀಡುವಂತೆ ಸೂಚಿಸಿದೆ.
ಕರ್ನಾಟಕ ಸರ್ಕಾರದ ವಿರುದ್ಧ ಕಿಡಿಕಾರಿರುವ ಸುಪ್ರೀಂಕೋರ್ಟ್ ಮಕ್ಕಳು ಭವಿಷ್ಯ, ಪೋಷಕರೊಂದಿಗೆ ಮಾತ್ರವಲ್ಲ ಶಿಕ್ಷಕರು ಮತ್ತು ಶಾಲಾ ಆಡಳಿತ ಮಂಡಳಿ ಜೊತೆಗೂ ರಾಜ್ಯ ಸರ್ಕಾರ ಆಟವಾಡುತ್ತಿದೆ ಎಂದು ಸುಪ್ರೀಂಕೋರ್ಟ್ ಕಿಡಿಕಾರಿದೆ.
ADVERTISEMENT
ADVERTISEMENT