ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್ ಅಕಾಲಿಕ ನಿಧನದಿಂದ ಕಾಂಗ್ರೆಸ್ ಆಘಾತಕ್ಕೊಳಗಾಗಿದೆ.
ಇವತ್ತು ನಡೆಯಬೇಕಿದ್ದ ಪ್ರಜಾಧ್ವನಿಯಾತ್ರೆಯನ್ನು ಕಾಂಗ್ರೆಸ್ ರದ್ದುಗೊಳಿಸಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಆರ್. ಧ್ರುವನಾರಾಯಣ ಅವರ ನಿಧನದ ಹಿನ್ನೆಲೆಯಲ್ಲಿ ಇಂದು ರಾಮನಗರದಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆ ರದ್ದು ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ದಾವಣಗೆರೆಯಿಂದ ಮೈಸೂರಿನತ್ತ ಸಿದ್ದರಾಮಯ್ಯ:
ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಇಂದು ಮತ್ತು ನಾಳಿನ ಪ್ರಜಾಧ್ವನಿ ಯಾತ್ರೆಯನ್ನು ಮುಂದೂಡಲಾಗಿದೆ. ಸಿದ್ದರಾಮಯ್ಯ ಅವರು ಇಂದು ದಾವಣಗೆರೆಯಿಂದ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ಕಾಂಗ್ರೆಸ್ ಮಾಧ್ಯಮಗೋಷ್ಠಿಯೂ ರದ್ದು:
ಇವತ್ತು ಬೆಳಗ್ಗೆ ನಿಗದಿಯಾಗಿದ್ದ ಕಾಂಗ್ರೆಸ್ ಮಾಧ್ಯಮಗೋಷ್ಠಿಯನ್ನೂ ರದ್ದುಗೊಳಿಸಲಾಗಿದೆ.
ADVERTISEMENT
ADVERTISEMENT