ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಮೂರು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಆಗಬೇಕು ಎಂಬ ಬೇಡಿಕೆಯನ್ನು ಹೈಕಮಾಂಡ್ ಮುಂದೆ ಇಡಲಾಗಿದೆ.
ಹೆಚ್ಚುವರಿ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸಿದರೆ ಲೋಕಸಭಾ ಚುನಾವಣೆಯಲ್ಲಿ ಅನುಕೂಲವಾಗುತ್ತದೆ ಎಂದು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಅವರಿಗೆ ಸಲಹೆ ನೀಡಿದ್ದೇವೆ
ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಹೇಳಿದ್ದಾರೆ.
ಲೋಕಸಭಾ ಚುನಾವಣೆ ಬರುತ್ತಿದೆ. ನೀವು ಹಿರಿಯರು. ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಚರ್ಚೆ ಮಾಡಲು ಸಚಿವರನ್ನು ಅವರು ಆಹ್ವಾನಿಸಿದ್ದರು. ಆಗ ಕೆಲವು ಸಚಿವರು ಉಪ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ತಮ್ಮ ಅಭಿಪ್ರಾಯ ಹೇಳಿದ್ದಾರೆ
ಎಂದು ಬೆಂಗಳೂರಲ್ಲಿ ಪರಮೇಶ್ವರ್ ಅವರು ಹೇಳಿದ್ದಾರೆ.
ಹೆಚ್ಚುವರಿ ಉಪ ಮುಖ್ಯಮಂತ್ರಿ ಮಾಡಿದರೆ ಅನುಕೂಲ ಆಗುತ್ತದೆ ಎಂದು ಕೆಲವು ಸಚಿವರು ಹೇಳಿದ್ದಾರೆ. ಹೆಚ್ಚುವರಿ ಉಪ ಮುಖ್ಯಮಂತ್ರಿ ಮಾಡುವುದು ಹೈಕಮಾಂಡ್ಗೆ ಬಿಟವಟ ವಿಚಾರ. ನಾವು ನಮ್ಮ ಸಲಹೆ ನೀಡಬಹುದು. ಸಲಹೆ ತೆಗೆದುಕೊಳ್ಳುವುದು, ಬಿಡುವುದು ಅವರಿಗೆ ಬಿಟ್ಟಿದ್ದು. ಉಪ ಮುಖ್ಯಮಂತ್ರಿ ಹುದ್ದೆ ಪಕ್ಷದ ಆಂತರಿಕ ವಿಚಾರ. ಸಾಧಕ-ಬಾಧಕ ನೋಡಿ ಹೈಕಮಾಂಡ್ ತೀರ್ಮಾನ ಮಾಡಲಿದೆ
ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಹೇಳಿದ್ದಾರೆ.
ADVERTISEMENT
ADVERTISEMENT