ರಾಜ್ಯ ಸರ್ಕಾರಿ ನೌಕರರ ಸಂಘದಿಂದ ತುರ್ತು ಸಭೆ

ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ ಬಿಜೆಪಿ ಸರ್ಕಾರದ ಕೊನೆಯ ಬಜೆಟ್​ನಲ್ಲಿ ಸರ್ಕಾರಿ ನೌಕರರ ಎರಡು ಪ್ರಮುಖ ಬೇಡಿಕೆಗಳನ್ನು ಕಡೆಗಣಿಸಲಾಗಿದೆ.
1. ವೇತನ ಮತ್ತು ಭತ್ಯೆಗಳ ಪರಿಷ್ಕರಣೆ ಸಂಬಂಧ ಏಳನೇ ವೇತನ ಆಯೋಗ ರಚಿಸಬೇಕು
2. ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ವಾಪಸ್​ ಪಡೆದು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು.
ಈ ಎರಡೂ ಬೇಡಿಕೆಗಳ ಈಡೇರಿಕೆ ಬಗ್ಗೆ ಬಜೆಟ್​​ನಲ್ಲಿ ಸಿಎಂ ಬೊಮ್ಮಾಯಿ ಘೋಷಿಸದೇ ಇರುವ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರು ಈಗ ಸರ್ಕಾರದ ವಿರುದ್ಧ ಆಕ್ರೋಶ ಭರಿತರಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಹೋರಾಟದ ಮುಂದಿನ ರೂಪುರೇಷೆಗಳನ್ನು ಚರ್ಚೆ ಮಾಡುವ ಸಂಬಂಧ ಬೆಂಗಳೂರಿನಲ್ಲಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ಆವರಣದಲ್ಲಿ ಇದೇ ಮಂಗಳವಾರ ಅಂದರೆ ಫೆಬ್ರವರಿ 21ರಂದು ತುರ್ತು ಸಭೆಯನ್ನು ಕರೆಯಲಾಗಿದೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾಯಿತ ಪ್ರತಿನಿಧಿಗಳು, ವೃಂದಗಳ ಅಧ್ಯಕ್ಷರು ಮತ್ತು ಚುನಾಯಿತ ನಿರ್ದೇಶಕರ ಸಭೆಯನ್ನು ಕರೆಯಲಾಗಿದೆ.
ಈ ತುರ್ತು ಸಭೆಯಲ್ಲಿ ಸರ್ಕಾರಿ ನೌಕರರ ಬದುಕಿನ ಬಗ್ಗೆ ಪ್ರಮುಖ ನಿರ್ಣಯವನ್ನು ಕೈಗೊಳ್ಳಲಾಗುತ್ತದೆ ಮತ್ತು ಸಭೆಯಲ್ಲಿ ತಪ್ಪದೇ ಭಾಗವಹಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್​ ಷಡಕ್ಷರಿ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here