ರಾಜ್ಯದ ಜನತೆಗೆ ಗ್ಯಾರಂಟಿಗಳನ್ನು ಘೋಷಣೆ ಮಾಡಿ ನುಡಿದಂತೆ ನಡೆದುಕೊಳ್ತಿರೋ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರತಿಯೊಬ್ಬರಿಗೂ ಸವಲತ್ತುಗಳನ್ನು ತಲುಪಿಸುವಲ್ಲಿ ಶ್ರಮಿಸ್ತಿದೆ.
ಇವತ್ತು ಸಿದ್ದರಾಮಯ್ಯನವರು ಘೋಷಿಸಿದ್ದ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ರೆಜಿಸ್ಟ್ರೇಷನ್ ಪ್ರಾರಂಭವಾಗಿದೆ.
ನಿರುದ್ಯೋಗಿ ಪದವೀಧರರಿಗೆ 3000 ರೂಪಾಯಿ ಹಾಗೂ ಡಿಪ್ಲೊಮಾ ಪದವೀಧರರಿಗೆ 1500 ರೂಪಾಯಿ ಮಾಸಿಕ ನಿರುದ್ಯೋಗ ಭತ್ಯೆಯ ನೆರವು ನೀಡುವ ಈ ಯುವನಿಧಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ.
ಎಸ್ಎಸ್ ಎಲ್ ಸಿ, ಪಿಯುಸಿ, ಡಿಗ್ರಿ ಅಥವಾ ಡಿಪ್ಲೊಮಾ ಮಾರ್ಕ್ಸ್ ಕಾರ್ಡ್ ಗಳನ್ನು ನೋಂದಣಿ ವೇಳೆ ನೀಡಬೇಕಾಗುತ್ತದೆ.
2023ರಲ್ಲಿ ತೇರ್ಗಡೆಯಾಗಿ ಕಳೆದ 6 ತಿಂಗಳಿಂದ ಕೆಲಸದ ಹುಡುಕಾಟದಲ್ಲಿರುವ ನಿರುದ್ಯೋಗಿ ಯುವಕ/ಯುವತಿಯರು ಮಾತ್ರ ಈ ಯೋಜನೆಗೆ ಅರ್ಹರಾಗಿರುತ್ತಾರೆ.ಆರ್ಥಿ ಕ ಸಂಕಷ್ಟದ ನಡುವೆ ಕನಸಿನ ಉದ್ಯೋಗದ ಹುಡುಕಾಟದಲ್ಲಿರುವ ನಿರುದ್ಯೋಗಿ ಯುವಜನರು ಯೋಜನೆಗೆ ನೊಂದಾಯಿಸಿಕೊಳ್ಳುವ ಮೂಲಕ ಸದುಪಯೋಗ ಪಡೆಯಬೇಕು ಅಂತ ಸಿಎಂ ಸಿದ್ದರಾಮಯ್ಯ ಅರ್ಹ ಫಲಾನುಭವಿಗಳಲ್ಲಿ ಮನವಿ ಮಾಡಿದ್ದಾರೆ.
5ನೇ ಯೋಜನೆ ಯಾವಾಗ ಜಾರಿಯಾಗುತ್ತೆ ಅಂತ ಪ್ರಶ್ನಿಸುತ್ತಿದ್ದವರಿಗೆ ಸಿದ್ದರಾಮಯ್ಯ ಸರ್ಕಾರ ಈ ಮೂಲಕ ಉತ್ತರಿಸಿದ್ದು, ರಾಜ್ಯಾದ್ಯಂತ ಸಾಕಷ್ಟು ಸಂಖ್ಯೆಯಲ್ಲಿ ಯುವಜನರು ಈ ಯೋಜನೆಗೆ ನೋಂದಣಿ ಮಾಡಿಕೊಳ್ತಿದ್ದಾರೆ.