ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರ ಗೌರವಧನವನ್ನು ಎರಡು ಪಟ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸದ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ತಿಂಗಳಿಗೆ 3 ಸಾವಿರ ರೂಪಾಯಿ, ಉಪಾಧ್ಯಕ್ಷರಿಗೆ 2 ಸಾವಿರ ರೂಪಾಯಿ ಗೌರವ ಧನ ನೀಡಲಾಗುತ್ತಿದೆ.
ಗ್ರಾಮ ಪಂಚಾಯತ್ ಸದಸ್ಯರಿಗೆ ಮಾಸಿಕ 1 ಸಾವಿರ ರೂಪಾಯಿ ಗೌರವ ಧನ ನೀಡಲಾಗುತ್ತಿದೆ.
ಇವತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಹೊರಡಿಸಿರುವ ಆದೇಶದಲ್ಲಿ ಗೌರವ ಧನ ಹೆಚ್ಚಳ ಮಾಡಲಾಗಿದೆ.
ಹೆಚ್ಚಳ ಆಗಿದೆಷ್ಟು..?
ಗ್ರಾಮ ಪಂಚಾಯತ್ ಅಧ್ಯಕ್ಷರ ಗೌರವಧನ ಮಾಸಿಕ 3 ಸಾವಿರ ರೂಪಾಯಿಯಿಂದ 6 ಸಾವಿರ ರೂಪಾಯಿಗೆ ಹೆಚ್ಚಳವಾಗಿದೆ.
ಗ್ರಾಮ ಪಂಚಾಯತ್ ಉಪಾಧ್ಯಕ್ಷರ ಗೌರವ ಧನ 2 ಸಾವಿರದಿಂದ 4 ಸಾವಿರ ರೂಪಾಯಿಗೆ ಹೆಚ್ಚಳವಾಗಿದೆ.
ಗ್ರಾಮ ಪಂಚಾಯತ್ ಸದಸ್ಯರ ಗೌರವ ಧನ 1 ಸಾವಿರ ರೂಪಾಯಿಯಿಂದ 2 ಸಾವಿರ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.
ADVERTISEMENT
ADVERTISEMENT