ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಫಾರ್ಮಸಿ ಅಧಿಕಾರಿ ಮತ್ತು ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ (ಜ್ಯೂನಿಯರ್ ಲ್ಯಾಬ್ ಟೆಕ್ನಿಷಿಯನ್) ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಹೊರಗುತ್ತಿಗೆ ನೇಮಕಾತಿ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಸೂಚನೆ ಪ್ರಕಟಿಸಿದೆ.
400 ಫಾರ್ಮಸಿ ಅಧಿಕಾರಿಗಳು ಮತ್ತು 150 ಮಂದಿ ಕಿರಿಯ ಲ್ಯಾಬ್ ಟೆಕ್ನಿಷಿಯನ್ಗಳನ್ನು ಹೊರಗುತ್ತಿಗೆ ಮೂಲಕ ಸರ್ಕಾರ ಸೇವೆಗೆ ನೇಮಿಸಿಕೊಳ್ಳಲಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಲ್ಪಾವಧಿ ಟೆಂಡರ್ ಮೂಲಕ ಹೊರಗುತ್ತಿಗೆ ನೇಮಕಾತಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.
ADVERTISEMENT
ADVERTISEMENT