ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಅಕ್ರಮ ಡಿನೋಟಿಫಿಕೇಷನ್ ಪ್ರಕರಣಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
2006ರಲ್ಲಿ ಯಡಿಯೂರಪ್ಪ ಅವರು ಸಿಎಂ ಆಗಿದ್ದ ವೇಳೆ ಬೆಂಗಳೂರಿನ ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿಯಲ್ಲಿ 15 ಎಕರೆ 30 ಗುಂಟೆ ಭೂಮಿಯನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ್ದರು ಎಂಬ ಆರೋಪದಡಿಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಮಹಾಲೆಕ್ಕ ಪರಿಶೋಶಧಕರ ವರದಿ ಆಧರಿಸಿ ಕರ್ನಾಟಕ ಹೈಕೋರ್ಟ್ನಲ್ಲಿ ಯಡಿಯೂರಪ್ಪ ಅವರು ಎಫ್ಐಆರ್ ರದ್ದತಿ ಕೋರಿ ಅರ್ಜಿ ಸಲ್ಲಿಸಿದ್ದರು.
ಎಫ್ಐಆರ್ ರದ್ದುಗೊಳಿಸಿ ಹೈಕೋರ್ಟ್ನ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.
ಸಿಎಜಿ ವರದಿ ಆಧರಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಆಧಾರವಲ್ಲ ಎಂದು 2015ರಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಆದೇಶವನ್ನು ಉಲ್ಲೇಖಿಸಿ ಪ್ರಕರಣ ರದ್ದುಗೊಳಿಸಲಾಗಿದೆ.
ವಿಭಾಗೀಯ ಪೀಠ 2015ರಲ್ಲಿ ನೀಡಿದ್ದ ಅದೇಶವನ್ನು ಪ್ರತಿವಾದಿಗಳು ಕೂಡಾ ಆಕ್ಷೇಪಿಸಿಲ್ಲದ ಕಾರಣ ಯಡಿಯೂರಪ್ಪ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ADVERTISEMENT
ADVERTISEMENT