11 ಐಎಎಸ್​ ಅಧಿಕಾರಿಗಳ ವರ್ಗಾವಣೆ

ಹನ್ನೊಂದು ಮಂದಿ ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಆದೇಶ ಹೊರಡಿಸಿದೆ.
ಕಪಿಲ್​ ಮೋಹನ್​ ಅವರನ್ನು ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.
ಉಮಾಶಂಕರ್​ ಎಸ್​ ಆರ್​ ಅವರನ್ನು ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.
ಮಂಜುನಾಥ್​ ಪ್ರಸಾದ್​ ಎನ್​ ಅವರನ್ನು ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.
ಕೆಎಸ್​ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ವಿ ಅನ್ಬುಕುಮಾರ್​ ಅವರನ್ನು ಕೃಷಿ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.
ಮೋಹನ್​ ರಾಜ್​ ಕೆ ಪಿ ಅವರನ್ನು ರೇಷ್ಮೆ ಮತ್ತು ತೋಟಗಾರಿಕೆ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.
ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಕಾರ್ಯದರ್ಶಿಯಾಗಿದ್ದ ಡಾ ರಿಚರ್ಡ್​​ ವಿನ್ಸೆಂಟ್​ ಡಿಸೋಜಾ ಅವರನ್ನು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಗಿರೀಶ್​ ಆರ್​ ಅವರನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ.
ಕರೀಗೌಡ ಅವರನ್ನು ಅಟಲ್​ ಜನಸ್ನೇಹಿ ಕೇಂದ್ರ ಇದರ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ.
ತುಮಕೂರು ಜಿಲ್ಲಾಧಿಕಾರಿಯಾಗಿದ್ದ ಪಾಟೀಲ್​ ಯಲಗೌಡ ಶಿವನಗೌಡ ಇವರನ್ನು ಕೃಷಿ ಇಲಾಖೆ ಆಯುಕ್ತರನ್ನಾಗಿ ವರ್ಗಾಯಿಸಲಾಗಿದೆ.
ಜಗದೀಶ್​ ಜಿ ಅವರನ್ನು ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ.
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್​ ಎಂ ಅವರನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ.