ಗೃಹ ಲಕ್ಷ್ಮಿ ಯೋಜನೆಯ ಹಣ ಇನ್ನೂ ಖಾತೆಗೆ ಜಮೆ ಆಗಿಲ್ವಾ..? ಗೃಹ ಲಕ್ಷ್ಮೀ ಯೋಜನೆಯಿಂದ ವಂಚಿತವಾಗಿರುವ ಅರ್ಹ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಯೋಜನೆಯಲ್ಲಿ ನೋಂದಣಿ ಆಗುವುದಕ್ಕೆ ಹೊಸ ಅವಕಾಶ ಕಲ್ಪಿಸಿದೆ.
ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ ಲಾಭವನ್ನು ಮತ್ತಷ್ಟು ಜನರಿಗೆ ತಲುಪುವಂತೆ ಮಾಡುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ವತಿಯಿಂದ ವಿಶೇಷ ಶಿಬಿರವನ್ನು ಆಯೋಜಿಸಿದೆ.
ರಾಜ್ಯದ ಎಲ್ಲಾ 5,000ಕ್ಕೂ ಹೆಚ್ಚು ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಏಕಕಾಲದಲ್ಲಿ ಈ ಶಿಬಿರ ನಡೆಯಲಿದೆ.
ಡಿಸೆಂಬರ್ 27ರಿಂದ 29ರವರೆಗೆ ಮೂರು ದಿನಗಳ ಕಾಲ ಶಿಬಿರವನ್ನು ಆಯೋಜಿಸಲಾಗಿದೆ.
ಈ ಶಿಬಿರದ ವೇಳೆ ಆಧಾರ್ ಜೋಡಣೆ,, ಬ್ಯಾಂಕಿಗೆ ಸಂಬಂಧಿಸಿದ ತೊಂದರೆ, ಇ-ಕೆವೈಸಿ ಅಪ್ಡೆಟ್, ಹೊಸ ಬ್ಯಾಂಕ್ ಖಾತೆ ಸಂಪರ್ಕ ಸೇರಿದಂತೆ ಹಲವು ಅಡೆತಡೆಗಳನ್ನು ನಿವಾರಿಸಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ನೇರ ಹಣ ವರ್ಗಾವಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಉದ್ದೇಶಿಸಲಾಗಿದೆ.
ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಮೂರು ದಿನಗಳ ಕಾಲ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ಈ ಶಿಬಿರಗಳನ್ನು ಆಯೋಜಿಸಲಾಗುವುದು, ಬಾಪೂಜಿ ಸೇವಾ ಕೇಂದ್ರದ ಗಣಕಯಂತ್ರ ನಿರ್ವಾಹಕರು, ಅಂಗನವಾಡಿ ಕಾರ್ಯಕರ್ತರು ಮತ್ತು ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವಿಸಸ್ (ಇ.ಡಿ.ಸಿ) ತಂಡಗಳು ಈ ಶಿಬಿರಗಳಲ್ಲಿ ಭಾಗವಹಿಸಲಿದ್ದಾರೆ.
ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಹಾಗೂ ಇತರೆ ಬ್ಯಾಂಕ್ಗಳ ಪ್ರತಿನಿಧಿಗಳು ಈ ಶಿಬಿರದಲ್ಲಿ ಭಾಗವಹಿಸಿ ನೆರವಾಗಲಿದ್ದಾರೆ.
ನುಡಿದಂತೆ ನಡೆಯುತ್ತಿರುವ ನಮ್ಮ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ ಲಾಭವನ್ನು ಮತ್ತಷ್ಟು ಜನರಿಗೆ ತಲುಪುವಂತೆ ಮಾಡುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ವತಿಯಿಂದ ವಿಶೇಷ ಶಿಬಿರವನ್ನು ಆಯೋಜಿಸಿದೆ. ರಾಜ್ಯದ ಎಲ್ಲಾ 5,000ಕ್ಕೂ ಹೆಚ್ಚು ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಏಕಕಾಲದಲ್ಲಿ ಡಿಸೆಂಬರ್ 27ರಿಂದ 29ರವರೆಗೆ ಮೂರು ದಿನಗಳ ಕಾಲ – ಆಧಾರ್ ಜೋಡಣೆ, – ಬ್ಯಾಂಕಿಗೆ ಸಂಬಂಧಿಸಿದ ತೊಂದರೆ, – ಇ-ಕೆವೈಸಿ ಅಪ್ಡೆಟ್, – ಹೊಸ ಬ್ಯಾಂಕ್ ಖಾತೆ ಸಂಪರ್ಕ ಸೇರಿದಂತೆ ಹಲವು ಅಡೆತಡೆಗಳನ್ನು ನಿವಾರಿಸಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ನೇರ ಹಣ ವರ್ಗಾವಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಉದ್ದೇಶಿಸಲಾಗಿದೆ. ತಾವೆಲ್ಲರೂ ಈ ಅಭಿಯಾನದ ಸಂಪೂರ್ಣ ಪ್ರಯೋಜನ ಪಡೆಯಬೇಕೆಂದು ಈ ಮೂಲಕ ಕೇಳಿಕೊಳ್ಳುತ್ತೇನೆ
ಎಂದು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮನವಿ ಮಾಡಿದ್ದಾರೆ.
ADVERTISEMENT
ADVERTISEMENT