ADVERTISEMENT
ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ ಮುಂದುವರೆದಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಇನ್ನೂ 8 ದಿನ ಮಳೆಯಬ್ಬರ ಮುಂದುವರೆಯಲಿದೆ.
ಇಂದಿನಿಂದ ಮೇ 21ರವರೆಗೆ ರಾಜ್ಯಾದ್ಯಂತ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ.
ಅದರಲ್ಲೂ ಮೇ 19 ಮತ್ತು 20 ರಂದು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆ ಹಾಗೂ ಅಲ್ಲಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.
ಮೇ 16ರವರೆಗೆ ಕರಾವಳಿ ಜಿಲ್ಲೆಗಳಲ್ಲಿ, 13 ರಂದು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಾಗೂ 13 ರಿಂದ 16 ರವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ADVERTISEMENT