ಧಾರಾಕಾರ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲ ಖಾಸಗಿ ಮತ್ತು ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ದ್ವಿತೀಯ ಪಿಯುಸಿವರೆಗಿನ ತರಗತಿಗಳಿಗೆ ರಜೆ ಘೋಷಿಸಲಾಗಿದೆ.
ನಾಳೆ ಅಂದರೆ ಜೂನ್ 28ರಂದು ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ.
ಈ ಮುಂಗಾರುವಿನಲ್ಲಿ ಇದೇ ಮೊದಲ ಬಾರಿಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯಬ್ಬರದ ಕಾರಣಕ್ಕಾಗಿ ರಜೆ ಘೋಷಣೆ ಮಾಡಲಾಗಿದೆ.
ADVERTISEMENT
ADVERTISEMENT