ADVERTISEMENT
ಇವತ್ತಿನಿಂದ ಗುರುವಾರದವರೆಗೆ ರಾಜ್ಯದಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಜುಲೈ 16 ಭಾನುವಾರ, ಜುಲೈ 17 ಸೋಮವಾರ ಕರ್ನಾಟಕದ ಉತ್ತರ ಒಳನಾಡು ಮತ್ತು ಕರಾವಳಿ ಕರ್ನಾಟಕದಲ್ಲಿ ರಣಭೀಕರ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಜುಲೈ 18 ಮಂಗಳವಾರ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಭಾರೀ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ.
ಜುಲೈ 19 ಬುಧವಾರ ಮತ್ತು ಜುಲೈ 20 ಗುರುವಾರದಂದು ಕರ್ನಾಟಕದಾದ್ಯಂತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ADVERTISEMENT