ಮಳೆ ಕೊರತೆ ಎದುರಿಸುತ್ತಿರುವ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಜೂನ್ 27ರವರೆಗೆ ಮಳೆ ಎಚ್ಚರಿಕೆ ನೀಡಲಾಗಿದೆ.
ಕರಾವಳಿಯಲ್ಲಿ ಆರೆಂಜ್ ಅಲರ್ಟ್:
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್ 27ರ ಬೆಳಗ್ಗೆ 8 ಗಂಟೆಯವರೆಗೆ 64 ಮಿಲಿ ಮೀಟರ್ನಿಂದ 224 ಮಿಲಿ ಮೀಟರ್ವರೆಗೆ ಭಾರೀ ಮಳೆ ಆಗಬಹುದು ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಮಲೆನಾಡಲ್ಲಿ ಸಾಧಾರಣ ಮಳೆ ನಿರೀಕ್ಷೆ:
ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಸಾಧಾರಣ ಮತ್ತು ಭಾರೀ ಮಳೆ ಆಗುವ ನಿರೀಕ್ಷೆ ಎಂದು ಹವಾಮಾನ ಇಲಾಖೆ ಹೇಳಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರ ಮಳೆ:
ಉತ್ತರ ಒಳನಾಡಿನ 11 ಜಿಲ್ಲೆಗಳಲ್ಲಿ ಹಗುರ ಮತ್ತು ಸಾಧಾರಣ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡು:
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಮತ್ತು ಒಣಹವೆ ಮುಂದುವರಿಯಲಿದೆ ಎಂದು ಅಂದಾಜಿಸಲಾಗಿದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ADVERTISEMENT
ADVERTISEMENT