ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗೂ ಮೊದಲು ರಾಜ್ಯಸಭಾ ಚುನಾವಣೆ ನಡೆಯಲಿದೆ. ಫೆಬ್ರವರಿ 27ರಂದು ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಫೆಬ್ರವರಿ 15 ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ.
ಹಾಲಿ ರಾಜ್ಯಸಭಾ ಸಂಸದರಾದ ಕಾಂಗ್ರೆಸ್ನ ಎಲ್ ಹನುಮಂತಯ್ಯ, ಸೈಯದ್ ನಾಸೀರ್ ಹುಸೇನ್, ಜಿ ಸಿ ಚಂದ್ರಶೇಖರ್ ಮತ್ತು ಕೇಂದ್ರ ಸಚಿವರೂ ಆಗಿರುವ ಬಿಜೆಪಿ ಸಂಸದ ರಾಜೀವ್ ಚಂದ್ರಶೇಖರ್ ಅವರ ಅವಧಿ ಏಪ್ರಿಲ್ 2ರಂದು ಕೊನೆಯಾಗಲಿದೆ.
ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ 137 (ಇಬ್ಬರು ಪಕ್ಷೇತರರು) ಶಾಸಕರ ಬಲವನ್ನು ಹೊಂದಿದೆ. ಬಿಜೆಪಿ 66 ಮತ್ತು ಜೆಡಿಎಸ್ ಕೇವಲ 19 ಶಾಸಕರನ್ನು ಹೊಂದಿದೆ.
ರಾಜ್ಯಸಭಾ ಚುನಾವಣೆಯಲ್ಲಿ ಸದ್ಯಕ್ಕೆ ಕಾಂಗ್ರೆಸ್ ಮೂವರು ಸಂಸದರನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಇದೆ.