ದ್ವೀತಿಯ ಪಿಯುಸಿ ಪರೀಕ್ಷೆಗೂ ಈ ಬಾರಿ ಎಸ್ಎಸ್ಎಲ್ಸಿಯಂತೆ ಬಹು ಆಯ್ಕೆಯ ಪ್ರಶ್ನೆಗಳಿರಲಿವೆ.
ಹೊಸ ಪರೀಕ್ಷಾ ಪದ್ಧತಿಯನ್ನು ಜಾರಿಗೊಳಿಸುವ ಭಾಗವಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾದರಿ ಪ್ರಶ್ನೆ ಪತ್ರಿಕೆಯನ್ನು ಬಿಡುಗಡೆ ಮಾಡಿದೆ.
ಒಂದು ಅಂಕದ ಬಹು ಆಯ್ಕೆಯ ಪ್ರಶ್ನೆಗಳನ್ನು ಮಾದರಿ ಪ್ರಶ್ನೆ ಪತ್ರಿಕೆಯಲ್ಲಿ ಸೇರಿಸಲಾಗಿದೆ. ಒಟ್ಟು ಅಂಕಗಳ ಶೇಕಡಾ 15ರಿಂದ 20ರಷ್ಟು ಬಹು ಆಯ್ಕೆಯ ಪ್ರಶ್ನೆಗಳಿರಲಿವೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಒತ್ತಡ ನಿವಾರಿಸುವ ಸಲುವಾಗಿ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನಕ್ಕೆ ಸಹಕಾರಿಯಾಗುವ ನಿಟ್ಟಿನಲ್ಲಿ ಮಂಡಳಿ ಬಹು ಆಯ್ಕೆಯ ನಿರ್ಧಾರ ಕೈಗೊಂಡಿದೆ.
ADVERTISEMENT
ADVERTISEMENT