ಇವತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಇವತ್ತು ಮಧ್ಯಾಹ್ನ 12.30ಕ್ಕೆ ಬೆಂಗಳೂರಿನಲ್ಲಿರುವ ಎಸ್ ಎಸ್ ಎಲ್ ಸಿ ಬೋರ್ಡ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ.
ಸಚಿವರ ಸುದ್ದಿಗೋಷ್ಠಿ ಬಳಿಕ ಮಧ್ಯಾಹ್ನ 1 ಗಂಟೆಗೆ ಇಲಾಖೆಯ ವೆಬ್ ಸೈಟ್ ಮತ್ತು ವಿದ್ಯಾರ್ಥಿಗಳ ಮೊಬೈಲ್ ಗೆ ಫಲಿತಾಂಶ ಲಭ್ಯವಾಗಲಿದೆ.
ಇವತ್ತೇ ಶಾಲೆಗಳಲ್ಲೂ ಫಲಿತಾಂಶ ಲಭ್ಯವಾಗುವ ವ್ಯವಸ್ಥೆ ಮಾಡಲಾಗಿದೆ.
8.50 ಲಕ್ಷ ಎಸ್ ಎಸ್ ಎಲ್ಸಿ ವಿದ್ಯಾರ್ಥಿಗಳು ಪರೀಕ್ಷೆಗೆ ಬರೆದಿದ್ದರು.