ಬಾಗಲಕೋಟೆ: ಪ್ರವಾಹಕ್ಕೆ ಕೊಚ್ಚಿ ಹೋದ ಗುಳ್ಳಾಪುರ ಹಳವಳ್ಳಿ ಸಂಪರ್ಕ ಸೇತುವೆ

ಬಾಗಲಕೋಟೆ: ಬೆಳಗಾವಿ ಜಿಲ್ಲೆ ಹಾಗೂ ಮಹಾರಾಷ್ಟ್ರ ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಬಾಗಲಕೋಟೆ ಜಿಲ್ಲೆಯಲ್ಲಿ ಹರಿಯುತ್ತಿರುವ ಘಟಪ್ರಭಾ ನದಿಗೆ ಹಿಡಕಲ್ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.

ಘಟಪ್ರಭಾ ನದಿಗೆ 1 ಲಕ್ಷ 10 ಸಾವಿರ ಕ್ಯೂಸೆಕ್​ ನೀರು ಹರಿದು ಬರುತ್ತಿದ್ದು, ಈ ಹಿನ್ನೆಲೆ, ಮಾಚಕನೂರು ಹೊಳೆ ಬಸವೇಶ್ವರ ದೇವಾಲಯ ಜಲಾವೃತಗೊಂಡಿದೆ.

ಮಾಚಕನೂರು ಗ್ರಾಮದ ಸುತ್ತ-ಮುತ್ತ ಹೊಲಗದ್ದೆಗಳಿಗೆ ನೀರು ನುಗ್ಗಿದ್ದು, ಘಟಪ್ರಭಾ ಜಲಾಶಯ ಪ್ರದೇಶದಲ್ಲಿ ಮಳೆ ಮುಂದುವರೆದ್ದಿದೆ.

ಮತ್ತೆ ಘಟಪ್ರಭಾ ನದಿ ಪಾತ್ರದ ಗ್ರಾಮಸ್ಥರಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಹಲವೆಡೆ ಸೇತುವೆಗಳು ಜಲಾವೃತಗೊಂಡು ಸಂಚಾರ ಬಂದ್ ಆಗಿದೆ.

ಮುಧೋಳ ತಾಲೂಕಿನ ಮಿರ್ಜಿ-ಅಕ್ಕಿಮರಡಿ, ಮಹಾಲಿಂಗಪೂರ-ಯಾದವಾಡ್, ನಂದಗಾವ್-ಮಹಾಲಿಂಗಪೂರ, ಒಂಟಗೊಡಿ – ಸೊರಗಾವ,ಡವಳೇಶ್ವರ -ಮಹಾಲಿಂಗಪೂರ ಸೇತುವೆ ಮುಳುಗಡೆ ಆಗಿದ್ದು, 9 ಗ್ರಾಮಗಳ ಸಂಪರ್ಕ ಕಡಿತವಾಗಿ, ಸುತ್ತುವರೆದು ಸಂಚಾರ ಮಾಡುವ ಸ್ಥಿತಿ ನಿರ್ಮಾಣ ವಾಗಿದೆ.

ಮಿರ್ಜಿ, ಮಲ್ಲಾಪೂರ, ಒಂಟಗೋಡಿ, ಚನಾಳ, ನಾಗರಾಳ, ಅಕ್ಕಿಮರಡಿ, ನಂದಗಾವ ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಸಂಚಾರಕ್ಕೆ ಸ್ಥಳೀಯರು ಪರದಾಡುವಂತಾಗಿದೆ.

LEAVE A REPLY

Please enter your comment!
Please enter your name here