ಇವತ್ತು ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ, ಹಾಸನ, ಶಿವಮೊಗ್ಗ, ದಾವಣಗೆರೆ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉಳಿದ ಜಿಲ್ಲೆಗಳಲ್ಲಿ ಸಾಧಾರಣದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಜೂನ್ 26ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ, ಹಾಸನ, ಶಿವಮೊಗ್ಗ,ಕೊಡಗು, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಷಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಎಚ್ಚರಿಕೆ ನೀಡಲಾಗಿದೆ.
ಜೂನ್ 27ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ, ಹಾಸನ, ಶಿವಮೊಗ್ಗ,ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.
ಜೂನ್ 28ರಂದು ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆ ಆಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 28ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು,ಕೊಡಗು, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲ್ಬುರ್ಗಿ, ಬೀದರ್ನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ.
ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ.
ಜೂನ್ 29ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು,ಕೊಡಗು, ಬೆಳಗಾವಿ, , ಕಲ್ಬುರ್ಗಿ, ಯಾದಗಿರಿ, ರಾಯಚೂರು ಭಾರೀ ಮಳೆಯಾಗುವ ನಿರೀಕ್ಷೆ ಇದೆ.
ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ADVERTISEMENT
ADVERTISEMENT