ಇವತ್ತು ಕರ್ನಾಟಕದಲ್ಲಿ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಇವತ್ತು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಈ ಮೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ADVERTISEMENT
ADVERTISEMENT