No Result
View All Result
KAS ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಿಹಿ ಸುದ್ದಿ ಕೊಟ್ಟಿದೆ.
ಫೆಬ್ರವರಿಯಲ್ಲಿ ಅಧಿಸೂಚನೆ ಹೊರಡಿಸಲಾಗಿರುವ 384 ಕೆಎಎಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಕ್ಕೆ ಒಂದು ಬಾರಿ ವಯೋಮಿತಿ ಸಡಿಲಿಸಿ ಹೆಚ್ಚುವರಿ ಅವಕಾಶವನ್ನು ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
2017-18ನೇ ಸಾಲಿನಲ್ಲಿ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ನೇಮಕಾತಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳಿಗೆ 2023-24ನೇ ಸಾಲಿನ ನೇಮಕಾತಿಯಲ್ಲಿ ಪರೀಕ್ಷೆ ಬರೆಯಲು ವಯಸ್ಸಿನ ನಿರ್ಬಂಧವಿಲ್ಲದೇ ಒಂದು ಬಾರಿಗೆ ಸೀಮಿತಗೊಳಿಸಿ ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶ ನೀಡಿ ಆದೇಶ ಹೊರಡಿಸಲಾಗಿದೆ.
2017-18ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ಆ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವುದಕ್ಕೆ 15 ದಿನಗಳ ಕಾಲಾವಕಾಶ ನೀಡುವಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಸೂಚಿಸಲಾಗಿದೆ.
ಜುಲೈ 21ರಂದು ಕೆಎಎಸ್ ಗೆಜೆಟೆಡ್ ಪ್ರೋಬೇಷನರಿ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ ನಡೆಯಲಿದೆ.
No Result
View All Result
error: Content is protected !!