ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಇಂದು ಬೆಂಗಳೂರಿನಲ್ಲಿ ಆಮ್ಆದ್ಮಿ ಪಕ್ಷ ಸೇರ್ಪಡೆ ಆಗಿದ್ದಾರೆ.
ಇಂದು ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ರೈತ ಸಮಾವೇಶದಲ್ಲಿ ರಾಜ್ಯ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಅವರು ರಾಷ್ಟ್ರೀಯ ಸಂಚಾಲಕರಾದ ಅರವಿಂದ್ ಕೇಜ್ರಿವಾಲ್ ಅವರ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಆಮ್ಆದ್ಮಿ ಪಕ್ಷ ಕರ್ನಾಟಕದಲ್ಲಿ ರಾಜ್ಯ ರೈತ ಸಂಘದ ರಾಜಕೀಯ ಮುಖವಾಣಿ ಆಗಿರಲಿದೆ. ಆದ್ರೆ ರೈತ ಸಂಘ ಸ್ವತಂತ್ರವಾಗಿರಲಿದೆ ಎಂದು ಕೋಡಿಹಲ್ಳಿ ಚಂದ್ರಶೇಖರ್ ಹೇಳಿದ್ದಾರೆ. ಮುಂದುವರೆದು ಮಾತನಾಡಿದ ಅವರು, ಕುಟುಂಬ ರಾಜಕಾರಣದ ಬದಲು ಆಮ್ಆದ್ಮಿ ಪಕ್ಷ ಮತ್ತು ರಾಜ್ಯ ರೈತಸಂಘದ ಚುನಾವಣಾ ಪೂರ್ವ ಮೈತ್ರಿಗೆ ಬೆಂಬಲ ನೀಡುವಂತೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.