ಸಂಬಳ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (KPTCL) ಮತ್ತು ಎಲ್ಲಾ ಎಸ್ಕಾಂಗಳ ದ ನೌಕರರು ಮುಷ್ಕರಕ್ಕೆ ನಿರ್ಧರಿಸಿದ್ದಾರೆ. ಮಾರ್ಚ್ 16ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುವುದಾಗಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘ ಮತ್ತು ಒಕ್ಕೂಟ ಘೋಷಿಸಿದೆ.
ಮಾರ್ಚ್ 16ರಿಂದ ಅಧಿಕಾರಿಗಳು ಮತ್ತು ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಹೋರಾಟ ತೀವ್ರಗೊಳಿಸಲು ಕೆಪಿಟಿಸಿಎಲ್ ನೌಕರರು ನಿರ್ಧರಿಸಿದ್ದಾರೆ.
ವಿದ್ಯುತ್ ಕಂಪನಿಗಳ ಅಧಿಕಾರಿಗಳು ಮತ್ತುನೌಕರರ ಮುಷ್ಕರದಿಂದ ರಾಜ್ಯದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಬಹುದು.
ವೇತನ ಹೆಚ್ಚಳ ಮಾಡದೇ ಇದ್ದರೆ ಮುಷ್ಕರ ಮಾಡುವುದಾಗಿ ಈಗಾಗಲೇ ಇಂಧನ ಇಲಾಖೆಗೆ ಮಾಹಿತಿ ಕೊಟ್ಟಿದ್ದರೂ ನಮಗೆ ಸ್ಪಂದನೆ ಸಿಕ್ಕಿಲ್ಲ. ಆದರಿಂದ ನಾವು ಅನಿವಾರ್ಯವಾಗಿ ಮುಷ್ಕರ ಮಾಡುತ್ತಿದ್ದೇವೆ.
ನಮಗೆ ಪ್ರತಿ 5 ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಆಗಬೇಕಿತ್ತು. ಸರ್ಕಾರಿ ನೌಕರರಿಗೆ ಮದ್ಯಾತರ ಶೇಕಡಾ 17ರಷ್ಟು ವೇತನ ಪರಿಷ್ಕರಣೆ ಮಾಡಿದ್ದಾರೆ, ಆದರೆ ನಮಗೆ ವೇತನ ಪರಿಷ್ಕರಣೆ ಆಗಿಲ್ಲ. 01-04-2022 ರಿಂದ ವೇತನ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಬೇಕು
6 ವರ್ಷದಿಂದ ವೇತನ ಪರಿಷ್ಕರಣೆ ಆಗಿಲ್ಲ. ನಾವು ತುಂಬಾ ಆರ್ಥಿಕ ಸಂಕಷ್ಟದಲ್ಲಿ ಕೆಲಸ ಮಾಡುತ್ತಿದ್ದೇವೆ.
ನಮ್ಮ ಮುಷ್ಕರದಿಂದ ವಿದ್ಯುತ್ ವ್ಯತ್ಯಯದಲ್ಲಿ ಆಗುವ ಪರಿಣಾಮಕ್ಕೆ ನಾವು ಯಾವುದೇ ರೀತಿ ಜವಾಬ್ದಾರಿ ಅಲ್ಲ. ನಾವು ಕರ್ನಾಟಕದ ಜನತೆಗೆ ಕ್ಷಮೆ ಕೇಳುತ್ತೇವೆ
ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಹಾಗೂ ಒಕ್ಕೂಟದ ಅಧ್ಯಕ್ಷ ಲಕ್ಷ್ಮಿಪತಿ ಹೇಳಿದ್ದಾರೆ.