ಸಚಿವ ಸ್ಥಾನ ನೀಡದ್ದಕ್ಕೆ ಸದನಕ್ಕೆ ಹೋಗುತ್ತಿಲ್ಲ : ಕೆಎಸ್ ಈಶ್ವರಪ್ಪ ಬಹಿರಂಗ ಅಸಮಾಧಾನ

KS Eshwarappa

ಸಚಿವ ಸ್ಥಾನ ನೀಡದಿರೋದಕ್ಕೆ ನಾನು ಅಸಮಾದಾನ ಗೊಂಡಿದ್ದೇನೆ. ಆದ್ದರಿಂದ ಪ್ರಸ್ತುತ ನಡೆಯುತ್ತಿರುವ ಮುಂಗಾರು ವಿಧಾನಸಭಾ ಅಧಿವೇಶನಕ್ಕೆ ಹೋಗುತ್ತಿಲ್ಲ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪನವರು (KS Eshwarappa) ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಅವರು ಮತ್ತೆ ಮರಳಿ ಮಂತ್ರಿಯಾಗಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಆದರೆ, ಇದಕ್ಕೆ ಸಿಎಂ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಸೇರಿದಂತೆ ಹೈಕಮಾಂಡ್ ನಾಯಕರು ಕ್ಯಾರೆ ಎನ್ನುತ್ತಿಲ್ಲ.

ಇದರಿಂದ ಕುಪಿತಗೊಂಡಿರುವ ಈಶ್ವರಪ್ಪನವರು ಪಕ್ಷದ ನಾಯಕರ ವಿರುದ್ಧ ಬಹಿರಂಗ ಅಸಮಾಧಾನ ಹೊರಹಾಕುತ್ತಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಈಶ್ವರಪ್ಪನವರು (KS Eshwarappa), ನನಗೆ ಕ್ಲೀನ್ ಚಿಟ್ ಸಿಕ್ಕಿದೆ. ಆದರೆ ಸಚಿವ ಸ್ಥಾನ ಕೊಡುವುದನ್ನು ವಿಳಂಬ ಮಾಡುತ್ತಿದ್ದಾರೆ. ಇದರಿಂದ ನನಗೆ ಅಸಮಾಧಾನ ಆಗಿದೆ. ಹೀಗಾಗಿ ನಾನು ಅಧಿವೇಶನಕ್ಕೆ ಹೋಗುತ್ತಿಲ್ಲ. ಇದನ್ನು ಮುಚ್ಚುಮರೆ ಇಲ್ಲದೇ ಹೇಳುತ್ತೇನೆ ಎಂದು ಹೇಳುವ ಮೂಲಕ ಅಸಮಾಧಾನ ಇರುವುದನ್ನು ಬಹಿರಂಗವಾಗಿಯೇ ಹೇಳಿದ್ದಾರೆ.

ಇದನ್ನೂ ಓದಿ : BREAKING: ಗುತ್ತಿಗೆದಾರ ಸಂತೋಷ್​ ಆತ್ಮಹತ್ಯೆ – ಮಾಜಿ ಸಚಿವ ಈಶ್ವರಪ್ಪಗೆ ಪೊಲೀಸರ ಕ್ಲೀನ್​ಚಿಟ್​

LEAVE A REPLY

Please enter your comment!
Please enter your name here