ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುವ ಪ್ರಯಾಣಿಕರು ಬಸ್ ಅಪಘಾತದಲ್ಲಿ ಮೃತಪಟ್ಟರೆ ಸರ್ಕಾರದಿಂದ ನೀಡಲಾಗುವ ಪರಿಹಾರದ ಮೊತ್ತವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ.
ಹೊಸ ಪರಿಹಾರದ ಮೊತ್ತ ಹೊಸ ವರ್ಷದ ಮೊದಲ ದಿನವಾದ ಇಂದಿನಿಂದಲೇ ಜಾರಿಯಾಗಲಿದೆ.
ಕೆಎಸ್ಆರ್ಟಿಸಿ ಪ್ರಯಾಣಿಕರು ಅಪಘಾತದಲ್ಲಿ ಮೃತಪಟ್ಟರೆ ನೀಡಲಾಗುವ ಪರಿಹಾರದ ಮೊತ್ತವನ್ನು 7 ಲಕ್ಷ ರೂಪಾಯಿಯಷ್ಟು ಹೆಚ್ಚಳ ಮಾಡಲಾಗಿದೆ.
ಅಂದರೆ ಇವತ್ತಿನಿಂದ 3 ಲಕ್ಷ ರೂಪಾಯಿ ಬದಲು 10 ಲಕ್ಷ ರೂಪಾಯಿ ನೀಡಲಾಗುತ್ತದೆ.
49 ರೂಪಾಯಿಗಿಂತ ಕಡಿಮೆ ಮುಖಬೆಲೆಯ ಟಿಕೆಟ್ಗೆ ಯಾವುದೇ ಅಪಘಾತ ಪರಿಹಾರ ನಿಧಿ ವಂತಿಕೆಯನ್ನು ಪ್ರಯಾಣಿಕರಿಂದ ವಸೂಲಿ ಮಾಡಲ್ಲ.
50 ರೂಪಾಯಿಯಿಂದ 100 ರೂಪಾಯಿವರೆಗಿನ ಮುಖ ಬೆಲೆ ಟಿಕೆಟ್ಗೆ 1 ರೂಪಾಯಿ ಮತ್ತು 100ಕ್ಕಿಂತ ಹೆಚ್ಚು ಮುಖ ಬೆಲೆ ಟಿಕೆಟ್ಗೆ 2 ಅಪಘಾತ ಪರಿಹಾರ ನಿಧಿ ವಂತಿಕೆಯಾಗಿ ಪ್ರಯಾಣಿಕರಿಂದಲೇ ಸಂಗ್ರಹಿಸಲಾಗುತ್ತದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳು ಅಪಘಾತಕ್ಕೀಡಾಗಿ ಮೃತಪಟ್ಟ ಪ್ರಯಾಣಿಕರ ಕುಟುಂಬಕ್ಕೆ ಹೆಚ್ಚಿನ ಆರ್ಥಿಕ ನೆರವು ನೀಡುವ ಸದುದ್ದೇಶದಿಂದ ಪರಿಹಾರ ಮೊತ್ತವನ್ನು 3 ಲಕ್ಷದಿಂದ 10 ಲಕ್ಷ ರೂಪಾಯಿ ಹೆಚ್ಚಳ ಮಾಡಲಾಗಿದೆ.
ADVERTISEMENT
ADVERTISEMENT