ಸಾರಿಗೆ ಸಿಬ್ಬಂದಿ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ವಾಪಸ್ ಪಡೆಯುವ ಸಂಬಂಧ ಸಿಎಂ ಸಿದ್ದರಾಮಯ್ಯ ಸರ್ಕಾರ ಅಭಿಪ್ರಾಯ ಕೇಳಿದೆ.
ಮೊಕದ್ದಮೆಗಳನ್ನು ಹಿಂಪಡೆಯುವ ಸಂಬಂಧ ಅಭಿಪ್ರಾಯ ತಿಳಿಸುವಂತೆ ಪೊಲೀಸ್ ಮಹಾ ನಿರ್ದೇಶಕರು ಮತ್ತು ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ನಿದೇಶಕರಿಗೆ ಒಳಾಡಳಿತ ಇಲಾಖೆ ಕಾರ್ಯದರ್ಶಿ ಅವರು ಪತ್ರ ಬರೆದಿದ್ದಾರೆ.
ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಇದರ ರಾಜ್ಯ ಗೌರವಾಧ್ಯಕ್ಷರು ಇವರು ನಾಲ್ಕು ನಿಗಮಗಳ ಸಾರಿಗೆ ನೌರರ ಮೇಲೆ ದಾಖಲಾದ ಮೊಕದ್ದಮೆಗಳನ್ನು ಅಭಿಯೋಜನೆಯಿಂದ ಹಿಂಪಡೆಯವಂತೆ ಕೋರಿರುತ್ತಾರೆ.
ಈ ಕುರಿತು ಮನವಿಯಲ್ಲಿರುವ ಎಲ್ಲ ಪ್ರಕರಣಗಳನ್ನು ನಿಯಮಾನುಸಾರ ಪರಿಶೀಲಿಸಿ ಸ್ಪಷ್ಟ ಅಭಿಪ್ರಾಯದ ವರದಿಯನ್ನು ಸಮರ್ಥಿಸುವ ಪೂರಕವಾದ /ಅಗತ್ಯ ದಾಖಲೆಗಳೊಂದಿಗೆ ಸರ್ಕಾರಕ್ಕೆ ಒದಗಿಸಬೇಕೆಂದು