ST ಪಟ್ಟಿಗೆ ಕುರುಬ ಸಮುದಾಯ ಸೇರ್ಪಡೆ – ಕೇಂದ್ರ ಸರ್ಕಾರಕ್ಕೆ CM ಸಿದ್ದರಾಮಯ್ಯ ಸರ್ಕಾರ ಶಿಫಾರಸ್ಸು

ಕುರುಬ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್​ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.

ಈಗ ಕುರುಬ ಸಮುದಾಯ ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿದೆ.

ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ ಮಣಿವಣ್ಣನ್​ ಅವರು ಕೇಂದ್ರ ಸರ್ಕಾರ ಬುಡಕಟ್ಟು ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.

ಸಮುದಾಯವನ್ನು ಎಸ್​ಟಿ ಪಟ್ಟಿಗೆ ಸೇರಿಸುವಂತೆ ಕುರುಬ ಸಮುದಾಯದಿಂದ ಹಲವು ಮನವಿಗಳು ಬಂದಿವೆ. ಈ ಸಂಬಂಧ ಮೈಸೂರಲ್ಲಿರುವ ಕರ್ನಾಟಕ ರಾಜ್ಯ ಬುಡುಕಟ್ಟು ಅಧ್ಯಯನ ಸಂಸ್ಥೆಗೆ ಕುಲಶಾಸ್ತ್ರೀಯ ಅಧ್ಯಯನ ನಡೆಸುವಂತೆ 2019ರ ಮೇ 4ರಂದು ಸೂಚಿಸಲಾಗಿತ್ತು. ಕರ್ನಾಟಕ ರಾಜ್ಯ ಬುಡಕಟ್ಟು ಅಧ್ಯಯನ ಸಂಸ್ಥೆ ಮಾರ್ಚ್​ 23ರಂದು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.

ಈ ವರದಿಯ ಬಗ್ಗೆ ಸಂಪುಟದಲ್ಲಿ ಚರ್ಚಿಸಲಾಗಿದ್ದು ಮತ್ತು ವರದಿಯನ್ನು ಭಾರತ ಸರ್ಕಾರಕ್ಕೆ ರವಾನಿಸುವ ಬಗ್ಗೆ ತೀರ್ಮಾನಿಸಲಾಗಿದೆ. ಹೀಗಾಗಿ ರಾಜ್ಯದ ಎಸ್​ಟಿ ಪಟ್ಟಿಯಲ್ಲಿ ಕುರುಬ ಸಮುದಾಯವನ್ನು ಸೇರಿಸುವ ಸಂಬಂಧ ಅಗತ್ಯ ಕ್ರಮಗಳಿಗಾಗಿ ವರದಿಯನ್ನು ಭಾರತ ಸರ್ಕಾರಕ್ಕೆ ಸಲ್ಲಿಸುತ್ತಿದ್ದೇವೆ

ಎಂದು ಕೇಂದ್ರ ಬುಡಕಟ್ಟು ಸಚಿವಾಲಯದ ಕಾರ್ಯದರ್ಶಿ ಅನಿಲ್​ ಕುಮಾರ್​ ಝಾ ಅವರಿಗೆ ಬರೆದಿರುವ ಪತ್ರದಲ್ಲಿ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ ಮಣಿವಣ್ಣನ್​ ಹೇಳಿದ್ದಾರೆ.

LEAVE A REPLY

Please enter your comment!
Please enter your name here